Sunday, November 1, 2026
spot_imgspot_img
spot_imgspot_img

ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

- Advertisement -
- Advertisement -

ವಿಟ್ಲ: ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಸಮೂಹಗಾನ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರಿದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು, ಉಪಪ್ರಾಂಶುಪಾಲೆಯರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕಿಯರಾದ ಕವಿತಾ ಕೆ.ಜಿ. ಹಾಗೂ ಶೀಲಾ ನಿರೂಪಿಸಿದರು. ಕನ್ನಡದ ಕಂಪು ಮತ್ತು ನಾಡುನುಡಿಯ ಅಭಿಮಾನವನ್ನು ಸಾರುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.

- Advertisement -

Related news

error: Content is protected !!