- Advertisement -
- Advertisement -



ಪುತ್ತೂರು: ರಿಕ್ಷಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪಡೀಲ್-ಬನ್ನೂರು ಕ್ರಾಸ್ ಬಳಿ ಅ.31ರ ರಾತ್ರಿ ನಡೆದಿದೆ.
ಬೈಕೊಂದು ಬೋಳುವಾರಿನಿಂದ ಕೆಮ್ಮಾಯಿ ಕಡೆಗೆ ತೆರಳುತ್ತಿದ್ದ ವೇಳೆ, ರಿಕ್ಷಾ ಪಡೀಲ್ ಕಡೆಯಿಂದ ಬನ್ನೂರು ಕಡೆಗೆ ಏಕಾಏಕಿ ತಿರುವು ಪಡೆದಿದ್ದು, ಈ ಸಂದರ್ಭದಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ರಿಕ್ಷಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ರಿಕ್ಷಾ ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರ ಡೊಮಿನೋಸ್ ಪಿಜ್ಜಾ ಸಂಸ್ಥೆಯ ಡೆಲಿವರಿ ಸಿಬ್ಬಂದಿ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.
- Advertisement -








