Monday, November 2, 2026
spot_imgspot_img
spot_imgspot_img

ಯುವಕರು, ವಿದ್ಯಾರ್ಥಿಗಳಿಗೆ MDMA ಪೂರೈಕೆ: ಬೆಳ್ತಂಗಡಿಯ ನಸೀಮಾ ಮಂಗಳೂರು ಪೊಲೀಸರ ಬಲೆಗೆ

- Advertisement -
- Advertisement -

ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ.ಬಂಧಿತೆಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗುರಿಂಗಾನ ಮನೆ ನಿವಾಸಿ ನಸೀಮಾ ಅಲಿಯಾಸ್ ನಸೀಮ (42) ಎಂದು ಗುರುತಿಸಲಾಗಿದೆ.

ನವೆಂಬರ್ 1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಸೀಮಾಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಬಳಿಕ ಪಂಪ್‌ವೆಲ್ ಉಜ್ಜೋಡಿಯಲ್ಲಿರುವ ರಾಧಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ಒಂದನೇ ಮಹಡಿಯ ಫ್ಲ್ಯಾಟ್ ನಂ.103ಕ್ಕೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ.ಈ ವೇಳೆ ಸುಮಾರು 15.30 ಲಕ್ಷ ರೂ. ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಿಚಾರಣೆ ವೇಳೆ ಆರೋಪಿ ಮಂಗಳೂರು ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದುದಾಗಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳು ಭಾಗಿಯಾಗಿರುವ ಶಂಕೆಯಿದ್ದು, ಅವರ ಬಂಧನಕ್ಕಾಗಿ ತನಿಖೆ ಮುಂದುವರಿದಿದೆ.ಆರೋಪಿ ಹಾಗೂ ಮಾದಕ ವಸ್ತು ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು

- Advertisement -

Related news

error: Content is protected !!