Tuesday, November 3, 2026
spot_imgspot_img
spot_imgspot_img

ನಟ ತುಷಾರ್ ಕಪೂರ್‌ಗೆ 5 ಕೋಟಿ ರೂ.ಗೆ ಬೇಡಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಕರೆ

- Advertisement -
- Advertisement -

ಮುಂಬೈ: ಬಾಲಿವುಡ್ ನಟ ತುಷಾರ್ ಕಪೂರ್ ಗೆ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್‌ ಸೇರಿದವನು ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಕರೆ ಮಾಡಿದ್ದು, 5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ ಎಂದು ವರದಿಯಾಗಿದೆ.ಆದರೆ, ಮುಂಬೈ ಅಪರಾಧ ವಿಭಾಗದ ಪೊಲೀಸರು ಕೈಗೊಂಡ ಪ್ರಾಥಮಿಕ ತನಿಖೆಯಲ್ಲಿ ಕರೆ ಮಾಡಿದ ವ್ಯಕ್ತಿಯ ಗುರುತಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇದೊಂದು ಹುಸಿ ಕರೆ ಇರಬಹುದು ಎಂದು ಅವರು ಶಂಕಿಸಿದ್ದಾರೆ.ಪೊಲೀಸ್‌ ಮೂಲಗಳ ಪ್ರಕಾರ, ಕರೆ ಮಾಡಿದ ವ್ಯಕ್ತಿಯು ತನ್ನನ್ನು ತಾನು ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್‌ ಸದಸ್ಯನೆಂದು ಹೇಳಲಾದ ಹ್ಯಾರಿ ಬಾಕ್ಸರ್ ಎಂದು ಹೇಳಿಕೊಂಡು, ನಟ ತುಷಾರ್ ಕಪೂರ್ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ಹೇಳಲಾಗಿದೆ. ತುಷಾರ್ ಕಪೂರ್ ಈ ಕುರಿತು ತಕ್ಷಣವೇ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮುಂಬೈನಲ್ಲಿ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್ ಗೆ ಸೇರಿದವರು ಎಂದು ಹೇಳಲಾದ ಕೆಲವು ವ್ಯಕ್ತಿಗಳು ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.

- Advertisement -

Related news

error: Content is protected !!