Tuesday, November 3, 2026
spot_imgspot_img
spot_imgspot_img

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತದಿಂದ ನಿಧನ

- Advertisement -
- Advertisement -

ಬಂಟ್ವಾಳ: ಕೆಲಿಂಜ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ನ.2ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.

ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿಯಾಗಿದ್ದ ಅವರು, ನ.2ರಂದು ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ತಿಂಡಿ ಸೇವಿಸುತ್ತಿದ್ದ ವೇಳೆ ಕೆಮ್ಮು ಕಾಣಿಸಿಕೊಂಡು, ಬಳಿಕ ವಾಂತಿಯಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.34 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದ ವನಿತಾ ಶೆಟ್ಟಿಗಾರ್ ಅವರು ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಅವರ ನಿಧನದಿಂದ ಶಿಕ್ಷಣ ವಲಯದಲ್ಲಿ ಶೋಕ ಆವರಿಸಿದ್ದು, ಸಹೋದ್ಯೋಗಿ ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!