


ಪುತ್ತೂರು: ಟೀಮ್ ಮಾತೆರ್ಲ ಒಂಜೇ ಪುತ್ತೂರು ಸಂಘಟನೆ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಸದಸ್ಯರ ಆಯ್ಕೆ ನಡೆಯಿತು. ನ.3 ಮಂಗಳವಾರ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ ಪುತ್ತೂರು, ಉಪಾಧ್ಯಕ್ಷರಾಗಿ ಯೋಗಿಶ್ ಅಳಕೆ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಆಚಾರ್ಯ, ಕೋಶಾಧಿಕಾರಿಯಾಗಿ ಹರೀಶ್ ಮಂಜೊಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರವೀಣ್ ಕೊಯಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಹೇಶ್ ನೇಜಿಕಾರ್ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ಸುಪ್ರೀತ್ ಕೊಯಿಲ ಆಯ್ಕೆಯಾದರು.
ಕಾರ್ಯಕಾರಿಣಿ ಸದಸ್ಯರಾಗಿ ರಾಜ್ ಪ್ರದೀಪ್ ಕೊಯಿಲ, ಪ್ರಸಾದ್ ಕೊಯಿಲ, ಸಂತೋಷ್ ನಗರ ಹಾಗೂ ದಾಮೋದರ ಪರಮಾರ್ ಆಯ್ಕೆಯಾದರು.ಸಭೆಯಲ್ಲಿ ಮುಂದಿನ ಜನವರಿ ತಿಂಗಳಲ್ಲಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯಾರ್ಥವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಹಾಗೂ ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಿ ತೀರ್ಮಾನಿಸಲಾಯಿತು.
ಪ್ರವೀಣ್ ಕೊಯಿಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಕುಲಾಲ್ ವಂದಿಸಿದರು.








