Wednesday, November 4, 2026
spot_imgspot_img
spot_imgspot_img

ಪಡಿತರ ಚೀಟಿದಾರರು ನ.10ರೊಳಗೆ ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆ ಸೂಚನೆ

- Advertisement -
- Advertisement -

ಬೆಂಗಳೂರು : ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ನ.10 ಕೊನೆಯ ದಿನವಾಗಿದ್ದು, ಬಾಕಿ ಇರುವ ಪಡಿತರ ಚೀಟಿದಾರರು ಕೊನೆಯ ದಿನಾಂಕದೊಳಗೆ ತಪ್ಪದೇ ಇ-ಕೆವೈಸಿ ಮಾಡಿಸಬೇಕೆಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ಮರು ಇ-ಕೆವೈಸಿ ಮಾಡಿಸಬೇಕಿದ್ದ 2,67,64,276 ಪಡಿತರ ಚೀಟಿ ಫಲಾನುಭವಿಗಳ 8, ಪೈಕಿ ಕಳೆದ 24 ಗಂಟೆಗಳಲ್ಲಿ 2,26,30,747 ಫಲಾನುಭವಿಗಳು ಇ-ಕೆವೈಸಿ ಮಾಡಿಸಿದ್ದಾರೆ. ಇನ್ನೂ 41,33,529 ಫಲಾನುಭವಿಗಳು ಇ-ಕೆವೈಸಿ ಮಾಡಿಸಬೇಕಿದೆ. ಈಗಾಗಲೇ ಒಂದು ಬಾರಿ ಇ-ಕೆವೈಸಿ ಮಾಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ನ.10ರ ನಂತರ ಯಾವುದೇ ಕಾರಣಕ್ಕೂ ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗುವುದಿಲ್ಲ.

ಹಾಗಾಗಿ ಬಾಕಿ ಉಳಿದಿರುವ ಎಲ್ಲ ಫಲಾನುಭವಿಗಳು ‘ಅನ್ನ ಸೇವೆ’ ಮೊಬೈಲ್ ಅಪ್ಲಿಕೇಶನ್ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ AHARA ತಂತ್ರಾಂಶದ ಮೂಲಕ ನ.10ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!