Thursday, November 5, 2026
spot_imgspot_img
spot_imgspot_img

ಬಸ್ ದರ ಏರಿಕೆ ವಿರುದ್ಧ ಬಿಜೆಪಿಯಿಂದ ಭಿಕ್ಷಾಪಾತ್ರೆ ಹಿಡಿದು ವಿನೂತನ ಪ್ರತಿಭಟನೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ನಗರದ ಮೆಜೆಸ್ಟಿಕ್‌ನಲ್ಲಿ ಇಂದು ಭಿಕ್ಷಾಪಾತ್ರೆ ಹಿಡಿದು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಜನರ ಮೇಲೆ ತೆರಿಗೆ ವಿಧಿಸುವ ಮೂಲಕ ಸರಕಾರ ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.


ಗ್ಯಾರಂಟಿ ಯೋಜನೆಗಳಿಗಾಗಿ ಸರಕಾರ ಸುಮಾರು 5ರಿಂದ 6 ಸಾವಿರ ಕೋಟಿ ರೂ.ಗಳನ್ನು ಭರಿಸಬೇಕಿದ್ದು, ಅದಕ್ಕಾಗಿ ಜನರ ಮೇಲೆ ತೆರಿಗೆ ಹೊರೆ ಹಾಕಲಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದಲೇ 5ರಿಂದ 6 ಸಾವಿರ ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಈ ಹಣವನ್ನು ಜನರಿಗೆ ಮರಳಿಸಬೇಕು ಎಂದು ಒತ್ತಾಯಿಸಿದರು.
ಇದಲ್ಲದೆ ಹಾಲು, ಮೊಸರು, ತುಪ್ಪದ ಬೆಲೆಯನ್ನೂ ಏರಿಕೆ ಮಾಡಲಾಗಿದ್ದು, ಜನಸಾಮಾನ್ಯರು ಜೀವನ ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು.


ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಾರಿಗೆ ಇಲಾಖೆಯನ್ನು ದುಸ್ಥಿತಿಗೆ ತಂದಿದ್ದಾರೆ. ಬಸ್‌ಗಳಿಗೆ ಟೈರ್, ಟ್ಯೂಬ್, ಬ್ಯಾಟರಿ ಸೇರಿದಂತೆ ಅಗತ್ಯ ಬಿಡಿಭಾಗಗಳ ಕೊರತೆಯಿದ್ದು, ಸಂಚರಿಸಲು ಸಾಧ್ಯವಾಗದ ಬಸ್‌ಗಳನ್ನು ತಳ್ಳಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರ್. ಅಶೋಕ್ ಟೀಕಿಸಿದರು.

- Advertisement -

Related news

error: Content is protected !!