Friday, November 6, 2026
spot_imgspot_img
spot_imgspot_img

ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ – ವೇಗದ ಟ್ರಕ್ ಹರಿದು ಮೂವರು ಮಕ್ಕಳು ಸೇರಿ 7 ಮಂದಿ ಸಾವು

- Advertisement -
- Advertisement -

ರಾಂಚಿ: ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ಹರಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ಕರ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ರಾ-ತೋರ್ಪಾ ಮುಖ್ಯ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ರಾತ್ರಿ ಸುಮಾರು 9:30ರ ವೇಳೆಗೆ ಸ್ಕೂಟಿ ಸವಾರನೊಬ್ಬನ ನಿಯಂತ್ರಣ ತಪ್ಪಿ ಜೋನ್-ಲುಡ್ರು ತಿರುವಿನ ಬಳಿ ಪೊದೆಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಆತನಿಗೆ ಸಹಾಯ ಮಾಡಲು ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದರು. ಆಗ ಟೋರ್ಪಾ ಕಡೆಯಿಂದ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ಹರಿದಿದೆ.

ಟ್ರಕ್ ಡಿಕ್ಕಿಯ ತೀವ್ರತೆಗೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು, ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಸೇರಿದ್ದಾರೆ.

ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿದುಬರಬೇಕಿದೆ.

- Advertisement -

Related news

error: Content is protected !!