


ಸುಬ್ರಹ್ಮಣ್ಯ: ಯುವತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಕಡಬ ಕೊಣಾಜೆ ಗ್ರಾಮದ ಪ್ರಸಾದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವತಿಗೆ ಕಳೆದ ಮೂರು ವರ್ಷಗಳಿಂದ ಪ್ರಸಾದ್ ಪರಿಚಯವಿದ್ದು, ಸ್ನೇಹ ಹೊಂದಿದ್ದರು ಎನ್ನಲಾಗಿದೆ.
ನ.4ರಂದು ಸಂಜೆ ಆರೋಪಿಯು ಯುವತಿಯನ್ನು ಉಪ್ಪಿನಂಗಡಿಯಿಂದ ಕಾರಿನಲ್ಲಿ ಕರೆದುಕೊಂಡು ಕುಲ್ಕುಂದ ಮಾರ್ಗವಾಗಿ ಬಿಸಿಲೆ ಘಾಟ್‌ಗೆ ತೆರಳಿದ್ದಾನೆ. ರಾತ್ರಿ ವೇಳೆ ದಾರಿಮಧ್ಯೆ ಕೊಲೆ ಮಾಡುವ ಉದ್ದೇಶದಿಂದ ಕಬ್ಬಿಣದ ರಾಡ್‌ನಿಂದ ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹಲ್ಲೆಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವತಿಗೆ ನ.5ರಂದು ಬೆಳಿಗ್ಗೆ ಪ್ರಜ್ಞೆ ಬಂದಿದ್ದು, ಬಳಿಕ ಸುಬ್ರಹ್ಮಣ್ಯಕ್ಕೆ ತೆರಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ BNS 2023ರ ಕಲಂ 118(1), 109(1)ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಕೃತ್ಯ ನಡೆದ ಸ್ಥಳ ಹಾಸನ ಜಿಲ್ಲೆಯ ಯೆಸಳೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಯೆಸಳೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.








