Friday, November 6, 2026
spot_imgspot_img
spot_imgspot_img

ಸೌಜನ್ಯ ಪ್ರಕರಣ | ತಿಮರೋಡಿ, ವಿಠಲ ಗೌಡ ವಿರುದ್ಧ ಎಸ್‌ಐಟಿಗೆ ದೂರು

- Advertisement -
- Advertisement -

ಮಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿದ್ದ ಸಂತೋಷ್ ರಾವ್ ಬಿಡುಗಡೆಗೆ ಮಹೇಶ್ ಶೆಟ್ಟಿ ತಿಮರೋಡಿ, ವಿಠಲಗೌಡ ಹಲವು ರೀತಿಯ ಕಸರತ್ತು ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಹೈಕೋರ್ಟ್ ವಕೀಲ ಅಮೃತೇಶ್ ಎಸ್‌ಐಟಿಗೆ ಮನವಿ ಮಾಡಿದ್ದಾರೆ.ಈ ಪ್ರಕರಣದಲ್ಲಿ ಭ್ರಷ್ಟ ವಿಧಾನಗಳನ್ನು ಅನುಸರಿಸಿ ಆರೋಪಿಯ ಖುಲಾಸೆ ಪ್ರಯತ್ನ ಮಾಡಲಾಗಿದೆ. ಹೀಗಾಗಿ ಎಲ್ಲಾ ರೀತಿಯ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸುವ ಅಗತ್ಯವಿದೆ. ವಿಠಲ ಗೌಡ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯ ಹೇಳಿಕೆಗಳನ್ನು ಅಧಿಕೃತವಾಗಿ ದಾಖಲಿಸಬೇಕು.

ಸಂತೋಷ್ ರಾವ್‌ ಬಿಡುಗಡೆಗೆ ಅನುಕೂಲ ಮಾಡಿಕೊಡುವಲ್ಲಿ ಇವರ ಆಸಕ್ತಿಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಬೇಕು ಎಂದು ಅಮೃತೇಶ್‌ ಎಸ್‌ಐಟಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!