Saturday, November 7, 2026
spot_imgspot_img
spot_imgspot_img

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಯಾರ್ ಕಣ್ಣೂರಿನಲ್ಲಿ ಗ್ಯಾಸ್ ಸಾಗಿಸುತ್ತಿದ್ದ ವಾಹನ ಪಲ್ಟಿ

- Advertisement -
- Advertisement -

ಮಂಗಳೂರು: ಅಡ್ಯಾರ್ ಕಣ್ಣೂರು ನ್ಯಾಷನಲ್ ಹೈವೇ ಮಸೀದಿಯ ಬಸ್ ನಿಲ್ದಾಣದ ಬಳಿ ಗ್ಯಾಸ್ ಸಿಲಿಂಡರ್ ಹಾಗೂ ಕಮರ್ಷಿಯಲ್ ಗ್ಯಾಸ್ ಸಾಗಿಸುತ್ತಿದ್ದ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.

ಅಪಘಾತದ ಪರಿಣಾಮ ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ತೆರಳುವ ಹಾಗೂ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಬರುವ ಎರಡೂ ರಸ್ತೆಗಳ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

- Advertisement -

Related news

error: Content is protected !!