Saturday, November 7, 2026
spot_imgspot_img
spot_imgspot_img

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯ ಲೋಪದ ಆರೋಪದಡಿ ಪಿಎಸ್‌ಐ ವಿರುದ್ಧ ಶಿಸ್ತು ಕ್ರಮ, ಇಬ್ಬರು ಸಿಬ್ಬಂದಿ ಅಮಾನತು

- Advertisement -
- Advertisement -

ಉಡುಪಿ: ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್‌ಪಿ) ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಎಸ್‌ಪಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವಿಚಾರಣಾ ವರದಿಯ ಆಧಾರದ ಮೇಲೆ, ವರದಿಯನ್ನು ಪಶ್ಚಿಮ ವಲಯದ ಡಿಐಜಿ ಅವರಿಗೆ ರವಾನಿಸಲಾಗಿದೆ. ಇದರ ಭಾಗವಾಗಿ, ಹಿರಿಯಡ್ಕ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯ ಡಿಐಜಿ ಕಚೇರಿಗೆ ನಿಯೋಜಿಸಲಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಆರಂಭಿಸಲಾಗಿದೆ ಎಂದು ಹೇಳಿದರು.

ಆಸ್ಪತ್ರೆಯಲ್ಲಿ ಕಾವಲು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಲ್ಲಿಸಿದ ವಿಚಾರಣಾ ವರದಿಯನ್ನಾಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಅಮಾನತುಗೊಂಡ ಸಿಬ್ಬಂದಿಯ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್‌ಪಿ ತಿಳಿಸಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!