- Advertisement -
- Advertisement -

ಮಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ಉದ್ಯಮಿ ಸಂತೋಷ್ ಕುಮಾರ್ (69) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಮಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂತೋಷ್ ಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ಪುತ್ತೂರು ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಪುತ್ತೂರಿನ ಸಂತೋಷ್ ವೈನ್ಸ್ ಸಂಸ್ಥೆಯ ಮಾಲಕರಾಗಿಯೂ ಗುರುತಿಸಿಕೊಂಡಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಪುತ್ತೂರಿನ ಉದ್ಯಮ ವಲಯ ಹಾಗೂ ಸಾರ್ವಜನಿಕ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ.
- Advertisement -







