Sunday, November 8, 2026
spot_imgspot_img
spot_imgspot_img

ಚಿಕ್ಕಮಗಳೂರು: ದೇವಿರಮ್ಮ ಬೆಟ್ಟದಲ್ಲಿ ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಂಭೀರ ಗಾಯ

- Advertisement -
- Advertisement -

ಚಿಕ್ಕಮಗಳೂರು: ಜಿಲ್ಲೆಯ ಬಿಂಡಿಗ ದೇವಿರಮ್ಮನ ದರ್ಶನಕ್ಕೆ ನಿರೀಕ್ಷೆಗೂ ಮೀರಿ ಭಕ್ತರು ಬರುತ್ತಿದ್ದಾರೆ. ಬೆಟ್ಟದ ತುದಿಯಲ್ಲಿ ಭಕ್ತರು ಏರಲು ಅನುಕೂಲವಾಗುವಂತೆ ಅಳವಡಿಸಿದ್ದ ಕಂಬಿ ಮುರಿದುಬಿದ್ದು ಓರ್ವ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ಭಕ್ತರನ್ನ ಅಗ್ನಿಶಾಮಕ ಸಿಬ್ಬಂದಿ ಬೆಟ್ಟದಿಂದ ಹೊತ್ತುತಂದು, ಬಳಿಕ ಆಂಬ್ಯುಲೆನ್ಸ್‌ ಮೂಲಕ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ದೇವಿರಮ್ಮ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆಮಾಡಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ದೇವಿಯ ಆಶೀರ್ವಾದ ಪಡೆಯಲು ಸುಮಾರು 1 ಲಕ್ಷ ಭಕ್ತರು ಬಂದಿದ್ದಾರೆ. ಇಂದು ದೇವಿರಮ್ಮನ ದರ್ಶನಕ್ಕೆ ಕಡೆಯ ದಿನವಾಗಿರುವುದರಿಂದ ನಿನ್ನೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಅಪಾರ ಭಕ್ತರು ಬೆಟ್ಟದತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!