Monday, November 9, 2026
spot_imgspot_img
spot_imgspot_img

ಕೈರೋದಲ್ಲಿ ಭೀಕರ ರೈಲು ಅಪಘಾತ: 7 ಮಂದಿ ಮೃತ್ಯು, 112ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಕೈರೋ: ಈಜಿಪ್ಟ್‌ನ ರಾಜಧಾನಿ ಕೈರೋ ನಗರದ ಹೊರವಲಯದಲ್ಲಿ ಎರಡು ಪ್ರಯಾಣಿಕ ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದು, 112ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಗಿಝಾ ಪ್ರಾಂತ್ಯದ ಅಲ್-ಅಯ್ಯತ್ ಜಿಲ್ಲೆಯಲ್ಲಿ ರವಿವಾರ ಈ ದುರ್ಘಟನೆ ಸಂಭವಿಸಿದೆ. ಗಿಝಾ ಮತ್ತು ಫಯೌಮ್ ನಡುವೆ ಸಂಚರಿಸುತ್ತಿದ್ದ ಪ್ರಯಾಣಿಕ ರೈಲೊಂದು, ಕೈರೋದಿಂದ ದಕ್ಷಿಣದ ಅಸ್ವಾನ್‌ಗೆ ತೆರಳುತ್ತಿದ್ದ ಮತ್ತೊಂದು ರೈಲಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರೈಲು ಹಳಿ ತಪ್ಪಿ, ಕೆಲವು ಬೋಗಿಗಳು ರಸ್ತೆಯ ಮೇಲೆ ಉರುಳಿ ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

70ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳ ನಿಯೋಜನೆಅಪಘಾತ ಸಂಭವಿಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 70ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಸ್ಥಳದಲ್ಲಿನ ಅವಶೇಷಗಳನ್ನು ತೆರವುಗೊಳಿಸಲು ಹಾಗೂ ರೈಲು ಸಂಚಾರವನ್ನು ಪುನರಾರಂಭಿಸಲು ತುರ್ತು ರಕ್ಷಣಾ ತಂಡಗಳು ಮತ್ತು ಕ್ರೇನ್‌ಗಳನ್ನು ನಿಯೋಜಿಸಲಾಗಿದೆ ಎಂದು ಈಜಿಪ್ಟ್ ರಾಷ್ಟ್ರೀಯ ರೈಲ್ವೆ ಇಲಾಖೆ ತಿಳಿಸಿದೆ.

- Advertisement -

Related news

error: Content is protected !!