Monday, November 9, 2026
spot_imgspot_img
spot_imgspot_img

ದಿನೇದಿನೇ ಹದಗೆಡುತ್ತಿರುವ ವಾಯು ಗುಣಮಟ್ಟದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್

- Advertisement -
- Advertisement -


ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿ ಹಾಗೂ ದಿಲ್ಲಿ-ರಾಷ್ಟ್ರ ರಾಜಧಾನಿ ವಲಯದಲ್ಲಿ (ಎನ್‌ಸಿಆರ್) ದಿನೇದಿನೇ ಹದಗೆಡುತ್ತಿರುವ ವಾಯು ಗುಣಮಟ್ಟದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯ ನಿಯಂತ್ರಣಕ್ಕೆ ತುರ್ತು ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ವಾಹನಗಳು ಹೊರಸೂಸುವ ಹೊಗೆ ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ಪ್ರವೇಶ ಮತ್ತು ಸಂಚಾರ ನಿಯಂತ್ರಣ, ಹೊಗೆ ಹೊರಸೂಸುವಿಕೆ ಮಾನದಂಡಗಳ ಜಾರಿ ಹಾಗೂ ಮಾಲಿನ್ಯಕಾರಕ ವಾಹನಗಳನ್ನು ರಸ್ತೆಗಿಳಿಯದಂತೆ ತಡೆಯಲು ಕೈಗೊಂಡಿರುವ ಕ್ರಮಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ದಿಲ್ಲಿ ಮತ್ತು ಮೂರು ನೆರೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ.ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಯಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ನ್ಯಾಯಪೀಠದ ಆದೇಶವನ್ನು ರವಿವಾರ ಬಿಡುಗಡೆ ಮಾಡಲಾಗಿದೆ.ರಾಷ್ಟ್ರ ರಾಜಧಾನಿ ಹಾಗೂ ವಿಶಾಲ ಎನ್‌ಸಿಆರ್ ವ್ಯಾಪ್ತಿಯಲ್ಲಿ ಸಂಚರಿಸುವ ವಾಣಿಜ್ಯ ಮತ್ತು ವಾಣಿಜ್ಯೇತರ ವಾಹನಗಳ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಾವಳಿಗಳ ಕುರಿತು ವರದಿ ಸಲ್ಲಿಸುವಂತೆ ದಿಲ್ಲಿ ಮಹಾನಗರ ಪಾಲಿಕೆ (ಎಂಸಿಡಿ), ದಿಲ್ಲಿ ಸರಕಾರ, ದಿಲ್ಲಿ ಸಂಚಾರಿ ಪೊಲೀಸ್ ಇಲಾಖೆ ಹಾಗೂ ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸರಕಾರಗಳಿಗೆ ನ್ಯಾಯಾಲಯ ಸೂಚಿಸಿದೆ.

ಅಲ್ಲದೆ, ನಿಗದಿತ ಹೊಗೆ ಹೊರಸೂಸುವಿಕೆ ಮಾನದಂಡಗಳನ್ನು ಪಾಲಿಸದ ವಾಹನಗಳನ್ನು ಗುರುತಿಸುವ ಮತ್ತು ಅವುಗಳ ಸಂಚಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಾರಿಯಲ್ಲಿರುವ ವ್ಯವಸ್ಥೆಗಳ ಬಗ್ಗೆಯೂ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.ಕೃಷಿ ತ್ಯಾಜ್ಯ ಸುಡುವಿಕೆ ಪ್ರಮಾಣ ಕಡಿಮೆಯಾಗಿರುವುದು ಶ್ಲಾಘನೀಯ. ಆದರೆ, ವಾಹನಗಳ ಹೊಗೆ ಹೊರಸೂಸುವಿಕೆಯಿಂದ ಉಂಟಾಗುತ್ತಿರುವ ಸಮಸ್ಯೆ ತೀವ್ರಗೊಳ್ಳುತ್ತಿರುವುದು ಅಷ್ಟೇ ಗಂಭೀರ ಹಾಗೂ ಕಳವಳಕಾರಿ ವಿಚಾರವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ವಾಹನ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ನ್ಯಾಯಾಲಯ ಒತ್ತಿಹೇಳಿದೆ.

- Advertisement -

Related news

error: Content is protected !!