- Advertisement -
- Advertisement -

ಕಡಬ, ನ.10: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದ ಘಟನೆ ನ.9ರಂದು ಸಂಜೆ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ನಡೆದಿದೆ.
ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಕಡಬ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ.ಪಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು.



ಈ ವೇಳೆ ಗುಂಪಾಗಿ ಸೇರಿದ್ದವರು ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟದಲ್ಲಿ ತೊಡಗಿರುವುದು ಕಂಡುಬಂದಿದೆ. ಪೊಲೀಸರನ್ನು ಕಂಡು ಜೂಜಾಟದಲ್ಲಿ ಭಾಗಿಯಾಗಿದ್ದವರು ಪರಾರಿಯಾಗಿದ್ದು, ಈ ಪೈಕಿ ಚಾರ್ವಾಕ ನಿವಾಸಿ ಬಾಲಕೃಷ್ಣ (46) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆತನ ಬಳಿಯಿಂದ ಜೂಜಾಟಕ್ಕೆ ಸಂಬಂಧಿಸಿದ 1,030 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಸ್ಥಳದಲ್ಲಿದ್ದ ಐದು ಕೋಳಿಗಳು ಹಾಗೂ ಕೋಳಿ ಅಂಕಕ್ಕೆ ಬಳಸುತ್ತಿದ್ದ ಕತ್ತಿಯನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
- Advertisement -







