Wednesday, July 2, 2025
spot_imgspot_img
spot_imgspot_img

ದೇಶದ ಒಳಿತಿಗಾಗಿ ಬಿಜೆಪಿಯನ್ನು ಅಧಿಕಾರ ದಿಂದ ದೂರವಿಡಿ : ರೈ

- Advertisement -
- Advertisement -

ವಿಟ್ಲ: ಕೇಂದ್ರ ಮತ್ತು ರಾಜ್ಯ ಸರಕಾರದ ಬಿಜೆಪಿ ಆಡಳಿತದಿಂದಾಗಿ ಜನತೆ ಕಂಗಾಲಾಗಿದೆ, ಬೆಲೆಯೇರಿಕೆ, ಭ್ರಷ್ಟಾಚಾರ, ನಿರುದ್ಯೋಗ ದಂತಹ ಹಲವಾರು ಸಮಸ್ಯೆ ಗಳನ್ನು ಎದುರಿಸುತ್ತಿದೆ ಈ ನಿಟ್ಟಿನಲ್ಲಿ ದೇಶದ ಒಳಿತಿಗಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಮಾಣಿ ವಲಯ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಣಿ ನಾರಾಯಣ ಗುರು ಸಭಾ ಭವನದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಂಗ್ರೆಸ್ ಮುಕ್ತ ಕರ್ನಾಟಕ ಬಿಜೆಪಿಯ ಉದ್ದೇಶವಾದರೆ, ಹಸಿವು ಮುಕ್ತ ಕರ್ನಾಟಕ ಕಾಂಗ್ರೆಸ್ ನ ಸಂಕಲ್ಪ ಎಂದ ಅವರು ತಾನು ಸಚಿವನಾಗಿದ್ದ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ ಗ್ರಾಮಗಳ ಅಭಿವೃದ್ಧಿಯ ಉದ್ದೇಶದಿಂದ ಹಲವು ಪಂಚಾಯತ್ ಗಳ ಪುನರ್ ವಿಂಗಡಣೆಯನ್ನು ಮಾಡಲಾಗಿದೆ. ಅದೇ ರೀತಿ ಗ್ರಾ.ಪಂ.ವಿಜೇತ ಅಭ್ಯರ್ಥಿಗಳು ಗ್ರಾಮದ ಸರ್ವತೋಮುಖ ಅಭಿವೃದ್ದಿಯಲ್ಲಿ ತೊಡಗಿಸಿಕೊಂಡು ಮಾಣಿ ಗ್ರಾ.ಪಂ.ನಲ್ಲಿ ಕಾಂಗ್ರೆಸ್ ಆಡಳಿತ ಶಾಶ್ವತವಾಗಿ ಉಳಿ‌ಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಮ್.ಎಸ್. ಮೊಹಮ್ಮದ್ ಮಾತನಾಡಿದರು. ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಜಗನ್ನಾಥ ಚೌಟ, ಈಶ್ವರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಹಿರಿಯ ಕಾಂಗ್ರೆಸಿಗರಾದ ಬಾಲಕೃಷ್ಣ ಶೆಟ್ಟಿ ಕೊಡಾಜೆ, ವೆಂಕಪ್ಪ ಪೂಜಾರಿ, ರಾಜ್ ಕುಮಾರ್ ಹೆಗ್ಡೆ, ಹಮೀದ್ ಇನಾಮ್ ಮಾಣಿ, ಅಬ್ದುಲ್ ಅಝೀಝ್ ಸೂರಿಕುಮೇರು, ಪಾವುಲ್ ಡಯಾಸ್ ಸೂರಿಕುಮೇರು, ಅಬ್ದುಲ್ ಖಾದ್ರಿ ಸೂರಿಕುಮೇರು ಇವರನ್ನು ಗೌರವಿಸಲಾಯಿತು.

‌‌‌ಮಾಣಿ ಗ್ರಾ.ಪಂ. ಗೆ ನೂತನ ಸದಸ್ಯರಾಗಿ ಆಯ್ಕೆಯಾದ ಬಾಲಕೃಷ್ಣ ಆಳ್ವ ಕೊಡಾಜೆ, ಸುದೀಪ್ ಕುಮಾರ್ ಶೆಟ್ಟಿ ಕೊಡಾಜೆ, ಇಬ್ರಾಹಿಂ ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ ಡಿ.ಪೂಜಾರಿ, ಪ್ರೀತಿ ಡಿನ್ನಾ ಪಿರೇರಾ, ಸುಜಾತ, ಸೀತಾ ಹಾಗೂ ಪರಾಜಿತ ಅಭ್ಯರ್ಥಿಗಳಾದ ನಾಗರಾಜ ಪೂಜಾರಿ, ಸುನಂದಾ ಇವರನ್ನು ಅಭಿನಂದಿಸಲಾಯಿತು. ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ ವಂದಿಸಿದರು. ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ನಿರೂಪಿಸಿದರು.

- Advertisement -

Related news

error: Content is protected !!