- Advertisement -
- Advertisement -

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ರಸ್ತೆ ಬದಿಯ ಗೋಡೆಗೆ ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ನ.10ರ ರಾತ್ರಿ ಕಡಬ ತಾಲೂಕಿನ ಕುಂತೂರು ಗ್ರಾಮದ ಪದವು ಮುರತ ಚಡವು ಎಂಬಲ್ಲಿ ನಡೆದಿದೆ.ಕಡಬದಿಂದ ಅಲಂಕಾರ ಕಡೆಗೆ ತೆರಳುತ್ತಿದ್ದ KA 21 C 6145 ನೋಂದಣಿ ಸಂಖ್ಯೆಯ ಆಟೋರಿಕ್ಷಾವನ್ನು ರಮೇಶ್ (36) ಚಲಾಯಿಸುತ್ತಿದ್ದರು. ಆಟೋರಿಕ್ಷಾದ ಹಿಂಬದಿ ಸೀಟಿನಲ್ಲಿ ಭರತ್ (29), ಲಕ್ಷ್ಮಣ (34) ಹಾಗೂ ಇಳವರಸನ್ (31) ಪ್ರಯಾಣಿಸುತ್ತಿದ್ದರು.
ಈ ವೇಳೆ ಕುಂತೂರು ಗ್ರಾಮದ ಪದವು ಮುರತ ಚಡವು ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾ ರಸ್ತೆ ಬದಿಯ ಗೋಡೆಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ ಆಟೋರಿಕ್ಷಾದಲ್ಲಿದ್ದ ನಾಲ್ವರೂ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -








