- Advertisement -
- Advertisement -


ಬೆಳ್ತಂಗಡಿ: ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್‌ನ ಬೆಳ್ತಂಗಡಿ ಶಾಖೆಯಲ್ಲಿ ಪಿಗ್ಗಿ ಸಂಗ್ರಹಕಾರರಾಗಿ ಕೆಲಸ ಮಾಡುತ್ತಿದ್ದ ಪುನೀತ್ ಅಲಿಯಾಸ್ ಪುರುಷೋತ್ತಮ್ ಗೌಡ ಬಾಳೆಹಿತ್ತಿಲು (ಅವಿವಾಹಿತ) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.11ರ ರಾತ್ರಿ ನಡೆದಿದೆ.

ಕೆಲಸಕ್ಕೆ ರಜೆ ಹಾಕಿದ್ದ ಪುನೀತ್, ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಸಂಬಂಧಿಕರು ಹಾಗೂ ಸಹೋದರರೊಂದಿಗೆ ಉತ್ಸಾಹದಿಂದ ಕಾಲ ಕಳೆದಿದ್ದರು. ಆದರೆ, ನ.11ರ ರಾತ್ರಿ ಸುಮಾರು 9.30ರ ವೇಳೆಗೆ ಮನೆಯ ಸಮೀಪದ ತೋಟದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೃತರು ತಂದೆ ಸೇಸಪ್ಪ ಗೌಡ, ತಾಯಿ ವನಜಾ, ಸಹೋದರ ಶೇಖರ್, ಸಹೋದರಿ ದಿವ್ಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Advertisement -








