- Advertisement -
- Advertisement -


ವಿಟ್ಲ: ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ಇದರ ವಾರ್ಷಿಕ ಕ್ರೀಡಾಕೂಟವನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ, ವಿಟ್ಲ ಸರಕಾರಿ ಪ್ರೌಢಶಾಲೆ(RMSA) ಪ್ರಾಥಮಿಕ ಶಾಲಾ ವಿಭಾಗದ ದೈಹಿಕ ಶಿಕ್ಷಕರಾದ ವಿದ್ಯಾಶಂಕರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.


ಜೇಸೀಸ್ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಧರ ಶೆಟ್ಟಿ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ರಾಧಾಕೃಷ್ಣ ಪೈ, ಕಾರ್ಯದರ್ಶಿಯಾದ ರಾಘವೇಂದ್ರ ಪೈ, ಪ್ರಾಂಶುಪಾಲರಾದ ಜಯರಾಮ್ ರೈ, ಉಪಪ್ರಾಂಶುಪಾಲರಾದ ಕವಿತಾ ಕೆ.ಜಿ. ಮತ್ತು ಹೇಮಲತಾ ಜೆ., ದೈಹಿಕ ಶಿಕ್ಷಕರಾದ ಬಾನುಪ್ರಕಾಶ್ ಮತ್ತು ಶಶಿಕಲಾ, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕಿ ತುಳಸಿ ಕಾರ್ಯಕ್ರಮ ಸಂಯೋಜಿಸಿದರು. ಶಾಲಾ ವಿದ್ಯಾರ್ಥಿ ನಾಯಕಿ ರಾಶಿ ಜಿ.ಆರ್. ಸಹಕರಿಸಿದರು.
- Advertisement -








