Thursday, November 12, 2026
spot_imgspot_img
spot_imgspot_img

ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ, ವಿಟ್ಲಪಡ್ನೂರು ಶಕ್ತಿ ಕೇಂದ್ರದ ವತಿಯಿಂದ “ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ” ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆ

- Advertisement -
- Advertisement -

ವಿಟ್ಲಪಡ್ನೂರು: ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ, ವಿಟ್ಲಪಡ್ನೂರು ಶಕ್ತಿ ಕೇಂದ್ರದ ವತಿಯಿಂದ “ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ” ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆ ಇಂದು ಗುರುವಾರ (ನ.12ರಂದು) ನಡೆಯಿತು.

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ “ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ” ಬೃಹತ್ ಪಾದಯಾತ್ರೆ ಗುರುವಾರ ಬೆಳಿಗ್ಗೆ 10 ಗಂಟೆಗೆ ಕೊಡಂಗಾಯಿ ಮಲರಾಯ ದ್ವಾರದಿಂದ ವಿಟ್ಲಪಡ್ನೂರು ಪಂಚಾಯತ್‌ವರೆಗೆ ನಡೆಸಲಾಯಿತು.

ನಂತರ ಪಂಚಾಯತ್ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಮಾಧವ ಮಾವೆ, ಮಾಣಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರವಿಂದ ರೈ ಮೂರ್ಜೆಬೆಟ್ಟು, ಬಿಜೆಪಿ ಬಂಟ್ವಾಳ ಮಂಡಲದ ಉಪಾಧ್ಯಕ್ಷರಾದ ರವೀಶ್ ಶೆಟ್ಟಿ ಕರ್ಕಳ ಮತ್ತು ರೇಷ್ಮಾ ಶಂಕರಿ ಬಳಿಪಗುಳಿ, ವಿಟ್ಲಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ ಕುಲ್ಯಾರು, ನಿರ್ದೇಶಕರಾದ ಉದಯ ಭಟ್ ಕಾನಾ, ಧರ್ಮಾವತಿ, ಎಕೋ ವಿಷನ್ ಬಳಿಪಗುಳಿ ಮಾಲಕ ಸಿ. ರಾಜಾರಾಮ್ ಭಟ್, ಬಂಟ್ವಾಳ ರೈತ ಮೋರ್ಚಾ ಅಧ್ಯಕ್ಷ ಉಮೇಶ್ ಶೆಟ್ಟಿ ತಾರಿಯಡ್ಕ, ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ನಾಗೇಶ್ ಶೆಟ್ಟಿ ಕೊಡಂಗಾಯಿ ಸೇರಿದಂತೆ ಮಾಜಿ ಸದಸ್ಯರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ವಿವಿಧ ಜವಾಬ್ದಾರಿ ಹೊಂದಿರುವ ಪಕ್ಷದ ಮುಖಂಡರು, ಹಿರಿಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೈತ್ರೇಯಿ ಗುರುಕುಲದ ವಿದ್ಯಾರ್ಥಿಗಳು ವಂದೇ ಮಾತರಂ ಹಾಡಿದರು.

- Advertisement -

Related news

error: Content is protected !!