Thursday, November 12, 2026
spot_imgspot_img
spot_imgspot_img

ಭಾರ ಎತ್ತುವ ಸ್ಪರ್ಧೆ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ವಂದ್ಯಾಗೆ ಪ್ರಥಮ ಸ್ಥಾನ – ರಾಷ್ಟ್ರಮಟ್ಟಕ್ಕೆ ಆಯ್ಕೆ

- Advertisement -
- Advertisement -

ವಿಟ್ಲ: ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ವೋದಯ ಶಿಕ್ಷಣ ಸಂಸ್ಥೆ, ಸುಳ್ಯಪದವು ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕ–ಬಾಲಕಿಯರ ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ವಂದ್ಯಾ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರು ಮಣಿಪುರದ ಇಂಪಾಲ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

ವಿದ್ಯಾರ್ಥಿನಿಯು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಭಾನುಪ್ರಕಾಶ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!