


ಬಂಟ್ವಾಳ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತ, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಅರ್ಹ ಫಲಾನುಭವಿಗಳ ಪಿಂಚಣಿ ರದ್ದತಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಖಂಡಿಸಿ ಬಿಜೆಪಿ ಶಕ್ತಿ ಕೇಂದ್ರ ಪೆರಾಜೆ ವತಿಯಿಂದ ಪ್ರತಿಭಟನೆ ನಡೆಯಿತು.ಗ್ರಾಮದ ಬುಡೋಳಿ ಜಂಕ್ಷನ್ (ಸುರಭಿ) ಬಳಿಯಿಂದ ಪಾದಯಾತ್ರೆಯ ಮೂಲಕ ಪೆರಾಜೆ ಪಂಚಾಯತ್ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪಂಚಾಯತ್ ಮೂಲಕ ಮನವಿ ಸಲ್ಲಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕಿ ಸುಲೋಚನಾ ಜಿ.ಕೆ. ಭಟ್, ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಖರಿ ಹಾಗೂ ಜನವಿರೋಧಿ ನಿರ್ಧಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಅರ್ಹ ಫಲಾನುಭವಿಗಳ ಪಿಂಚಣಿ ರದ್ದತಿ ಹಾಗೂ ಆಶ್ರಯ ಯೋಜನೆಗಳ ಮಂಜೂರಾತಿ ವಿಳಂಬದಿಂದ ಬಡವರು ಸರಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕಿ ಸುಲೋಚನಾ ಜಿ.ಕೆ. ಭಟ್, ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಖರಿ ಹಾಗೂ ಜನವಿರೋಧಿ ನಿರ್ಧಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಅರ್ಹ ಫಲಾನುಭವಿಗಳ ಪಿಂಚಣಿ ರದ್ದತಿ ಹಾಗೂ ಆಶ್ರಯ ಯೋಜನೆಗಳ ಮಂಜೂರಾತಿ ವಿಳಂಬದಿಂದ ಬಡವರು ಸರಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.ನಾಗೇಶ್ ಭಂಡಾರಿ ಪ್ರತಿಭಟನೆಯ ಉದ್ದೇಶವನ್ನು ವಿವರಿಸಿದರು. ಹಿರಿಯ ಸಹಕಾರಿ ಧುರೀಣ ಬಿ.ಟಿ. ನಾರಾಯಣ ಭಟ್ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಕ್ತಿ ಕೇಂದ್ರ ಪ್ರಮುಖ್ ಶ್ರೀನಿವಾಸ್ ಪೂಜಾರಿ, ಬಿಜೆಪಿ ಮಂಡಲ ಕಾರ್ಯದರ್ಶಿ ಸನತ್ ಕುಮಾರ್, ಪ್ರಭಾರಿ ಜಯಶ್ರೀ ಕಲ್ಲಡ್ಕ, ಜಿಲ್ಲಾ ಮಹಿಳಾ ಪ್ರಮುಖ್ ಲಕಿತಾ, ಎಸ್ಸಿ ಮೋರ್ಚಾ ಮಂಡಲ ಕಾರ್ಯದರ್ಶಿ ಗೋಪಾಲ ಕಾರಾಗುಡ್ಡೆ, ನೇರಳಕಟ್ಟೆ ಸೊಸೈಟಿ ಉಪಾಧ್ಯಕ್ಷ ತನಿಯಪ್ಪ ಗೌಡ, ನಿರ್ದೇಶಕರಾದ ರಾಘವ ಗೌಡ, ಅಶೋಕ್ ರೈ, ಶಕೀಲಾ ಕೃಷ್ಣ, ಮಾಣಿ ಶಕ್ತಿ ಕೇಂದ್ರ ಮಹಿಳಾ ಪ್ರಮುಖ್ ಭವಾನಿ ಶೆಟ್ಟಿ, ಮಹಿಳಾ ಮೋರ್ಚಾ ಸದಸ್ಯರಾದ ಸುಶೀಲ, ಸುಧಾ, ವೀಣಾ ಕೃಷ್ಣ, ಸುಂದರಿ, ಪಂಚಾಯತ್ ಸದಸ್ಯರಾದ ರಾಜರಾಮ್ ಕಾಡೂರು, ಹರೀಶ್ ಶೆಟ್ಟಿ ಪಾನೂರು ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಪಿಂಚಣಿ ಸಂತ್ರಸ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಪಂಚಾಯತ್ ಮಾಜಿ ಸದಸ್ಯ ಉಮೇಶ್ ಸ್ವಾಗತಿಸಿ, ಧನ್ಯವಾದ ಅರ್ಪಿಸಿದರು.








