Friday, November 13, 2026
spot_imgspot_img
spot_imgspot_img

ಸೂರಿಕುಮೇರು ಬಳಿ ಹಾಡಹಗಲೇ ವೃದ್ಧೆಯ ಚಿನ್ನದ ಸರ ಕಳವು- ದಾರಿ ಕೇಳುವ ನೆಪದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ

- Advertisement -
- Advertisement -


ಮಾಣಿ: ಸಮೀಪದ ಸೂರಿಕುಮೇರು ಬಳಿ ಕಾಯರಡ್ಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯೊಬ್ಬರ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಸಿದು ಪರಾರಿಯಾದ ಘಟನೆ ಗುರುವಾರ ಹಾಡಹಗಲೇ ನಡೆದಿದೆ.

ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಬರಿಮಾರು ರಸ್ತೆಯ ಕಡೆಯಿಂದ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಯುವಕರು, ಮುಖಕ್ಕೆ ಮಾಸ್ಕ್ ಧರಿಸಿದ್ದರು ಎನ್ನಲಾಗಿದೆ. ದಾರಿ ಕೇಳುವ ನೆಪದಲ್ಲಿ ಮಹಿಳೆಯ ಬಳಿ ಬಂದ ದುಷ್ಕರ್ಮಿಗಳು ಕ್ಷಣಾರ್ಧದಲ್ಲಿ ಆಕೆಯ ಕುತ್ತಿಗೆಯಲ್ಲಿದ್ದ ಸರವನ್ನು ಕಸಿದುಕೊಂಡು ಅದೇ ರಸ್ತೆಯ ಮೂಲಕ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳು ಪರಾರಿಯಾಗಿರುವ ಬರಿಮಾರು ರಸ್ತೆಯು ಬಿ.ಸಿ.ರೋಡ್, ಮಂಗಳೂರು ಹಾಗೂ ಉಪ್ಪಿನಂಗಡಿ ಭಾಗಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಘಟನೆಯ ದೃಶ್ಯ ಸಮೀಪದ ನೂತನ ಕಟ್ಟಡವೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.


ಇತ್ತೀಚಿನ ದಿನಗಳಲ್ಲಿ ಹಾಡಹಗಲೇ ನಡೆಯುತ್ತಿರುವ ಸರಗಳ್ಳತನದ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಚಿನ್ನಾಭರಣ ಧರಿಸಿ ಮನೆಯಿಂದ ಹೊರಬರಲೂ ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಗಳ್ಳತನದ ವೇಳೆ ಮಹಿಳೆಯರ ಪ್ರಾಣಕ್ಕೂ ಅಪಾಯ ಎದುರಾಗುವ ಸಾಧ್ಯತೆ ಇರುವುದರಿಂದ ಪೊಲೀಸರು ಇಂತಹ ಕೃತ್ಯಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕೆಂಬ ಆಗ್ರಹ ಕೇಳಿಬಂದಿದೆ.

- Advertisement -

Related news

error: Content is protected !!