- Advertisement -
- Advertisement -



ಮಂಗಳೂರು: ನಂತೂರು ಜಂಕ್ಷನ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ(ನ.12) ರಾತ್ರಿ ನಡೆದಿದೆ.
ನ.12ರಂದು ರಾತ್ರಿ 9.50ರ ಸುಮಾರಿಗೆ ಪಂಪ್ವೆಲ್ ಕಡೆಯಿಂದ ಬಂದ ಲಾರಿ (ನಂ. TN-52-M-2121)ಯ ಚಾಲಕನು ನಿರ್ಲಕ್ಷ್ಯದಿಂದ ಚಾಲನೆ ಮಾಡಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಕಾರು (ನಂ. KA-20-MA-3395) ಲಾರಿಯ ಹಿಂಭಾಗಕ್ಕೆ ಢಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರು ಚಾಲಕ ನಿಜಾಮ್ ಮತ್ತು ಸಹ ಪ್ರಯಾಣಿಕ ಮುಫಿಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನು ಚಿಕಿತ್ಸೆಗಾಗಿ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ತೀವ್ರವಾಗಿ ಜಖಂಗೊಂಡಿದ್ದು, ಲಾರಿಯ ಹಿಂಭಾಗದ ಬಲಭಾಗಕ್ಕೆ ಸ್ವಲ್ಪ ಹಾನಿಯಾಗಿದೆ.
- Advertisement -








