Friday, November 13, 2026
spot_imgspot_img
spot_imgspot_img

ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ- ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು ಚಾಲನೆ

- Advertisement -
- Advertisement -

ಬೆಂಗಳೂರು: ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲೆ ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು.

ಪ್ರಧಾನಿ ಮೋದಿ ಅವರು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರಿನಲ್ಲಿ ದೇಶದ ಅತಿದೊಡ್ಡ ಭೂಗತ ಎಲ್‌ಪಿಜಿ ಸಂಗ್ರಹಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಚಾಮರಾಜನಗರ, ಚಿಕ್ಕಮಗಳೂರು, ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳನ್ನೂ ಉದ್ಘಾಟಿಸಲಿದ್ದಾರೆ.

ಇದರೊಂದಿಗೆ ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದು, ಮೈಸೂರಿನಲ್ಲಿ ಭಾರತದ ಮೊದಲ ಎಲ್‌ಇಡಿ ಡೋಮ್ ಪ್ಲಾನೆಟೋರಿಯಂ ಅನ್ನು ಉದ್ಘಾಟಿಸಲಿದ್ದಾರೆ.

ಈ ವೇಳೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವರಾದ ವಿ.ಸೋಮಣ್ಣ, ಕೇಂದ್ರ ಸೂಕ್ಷ್ಮ ಅತಿ ಸೂಕ್ಷ್ಮ ಹಾಗೂ ಕಾರ್ಮಿಕ ಇಲಾಖೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎಂ.ಎ.ಸಲೀಂ ಸೇರಿದಂತೆ ಸಂಸದರು, ಶಾಸಕಕರು ಹಾಗೂ ಗಣ್ಯರು ಉಪಸ್ಥಿತರಿದ್ದರು ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!