Friday, November 13, 2026
spot_imgspot_img
spot_imgspot_img

ಬೆಂಗಳೂರಿನ ಪಿಂಕ್‌ ಲೈನ್‌ ಮೆಟ್ರೋಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

- Advertisement -
- Advertisement -

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೊದಲ ಹಂತದ ಎತ್ತರಿಸಿದ ಮಾರ್ಗಕ್ಕೆ ಚಾಲನೆ ನೀಡಿದ್ದಾರೆ. ಸುಮಾರು 3,470 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಮಾರ್ಗವನ್ನು ತಾವರೆಕೆರೆ (ಎಸ್‌ಜಿ ಪಾಳ್ಯ) ಮೆಟ್ರೋ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಪಾಲರಾದ ಸುಧಾ ಯಾದವ್‌, ಕೃಷ್ಣ ಬೈರೇಗೌಡ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ಗಣ್ಯರು ಮತ್ತು ಮೆಟ್ರೋ ಅಧಿಕಾರಿಗಳು ಪ್ರಧಾನಿ ಜೊತೆಗಿದ್ದರು.

ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಅವರು ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಖರೀದಿಸಿ, ತಾವರೆಕೆರೆ(ಎಸ್‌ಜಿ ಪಾಳ್ಯ) ನಿಲ್ದಾಣದಿಂದ ಬಿಳೇಕಹಳ್ಳಿಯ ಐಐಎಂ ಬೆಂಗಳೂರು ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.

ಈ ಎಲಿವೇಟೆಡ್ (ಎತ್ತರಿಸಿದ) ಮಾರ್ಗವು ಕಾಳೇನ ಅಗ್ರಹಾರದಿಂದ ತಾವರೆಕೆರೆ (ಎಸ್‌ಜಿ ಪಾಳ್ಯ) ವರೆಗೆ 7.5 ಕಿ.ಮೀ. ಉದ್ದವಿದೆ. ಇದು ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ಒಟ್ಟು ಪಿಂಕ್ ಲೈನ್ ಯೋಜನೆಯ ಮೊದಲ ಹಂತವಾಗಿದೆ.

ಈ ಸೇವೆಯ ಆರಂಭದಿಂದ ದಕ್ಷಿಣ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರ ದಟ್ಟಣೆ ಕಡಿಮೆಯಾಗಲಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!