Saturday, November 14, 2026
spot_imgspot_img
spot_imgspot_img

ಕರ್ನಾಟಕದ ‘ಋತು ತಾರೆ’ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಮೆಚ್ಚುಗೆ

- Advertisement -
- Advertisement -

ಬೆಂಗಳೂರು: ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ‘ಋತು ತಾರೆ’ ಕಾರ್ಯಕ್ರಮದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ರೂಪಿಸಲಾಗಿದೆ. ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಈ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ಮಧ್ಯ ವಯಸ್ಸಿನಲ್ಲಿ ಮಹಿಳೆಯರ ಆರೋಗ್ಯದಲ್ಲಿ ಆಗುವ ಬದಲಾವಣೆಗಳನ್ನು ‘ಇದು ವಯಸ್ಸಿನ ಪರಿಣಾಮ’ ಎಂದು ಕಡೆಗಣಿಸಲಾಗುತ್ತದೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಮಹಿಳೆಯರ ಮಾತನ್ನು ಕೇಳಿಸಿಕೊಂಡು ಅವರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದಾಗಲೇ ನಿಜವಾದ ಆರೈಕೆ ಶುರುವಾಗುತ್ತದೆ ಎಂದೂ ಹೇಳಿದ್ದು, ಋತು ತಾರೆ ಮೂಲಕ ಕರ್ನಾಟಕ ಸರ್ಕಾರ ಆ ದಿಕ್ಕಿನಲ್ಲಿ ಹೆಜ್ಜೆ ಇಟ್ಟಿದೆ ಎಂದು ಅವರು ತಿಳಿಸಿದ್ದಾರೆ.

‘ಋತು ತಾರೆ’ 35 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ರೂಪಿಸಿರುವ ಕರ್ನಾಟಕ ರಾಜ್ಯ ಮಧ್ಯ ವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವಾಗಿದೆ.

ಇದರಡಿ ಮಹಿಳೆಯರಿಗೆ,

  • ಪ್ರತ್ಯೇಕ ಕ್ಲಿನಿಕ್‌ಗಳು
  • ಸಮಗ್ರ ಆರೋಗ್ಯ ತಪಾಸಣೆ
  • ಮಾನಸಿಕ ಆರೋಗ್ಯಕ್ಕೆ ಬೆಂಬಲ
  • ಪೌಷ್ಟಿಕ ಆಹಾರದ ಮಾರ್ಗದರ್ಶನ
  • ಮೆನೋಪಾಸ್ ಆರೈಕೆ ಮತ್ತು ಅಗತ್ಯವಿದ್ದರೆ ತಜ್ಞ ವೈದ್ಯರ ಚಿಕಿತ್ಸೆ
  • ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ಲಭ್ಯವಿರಲಿದೆ.
    ಮೊದಲ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಕಾರ್ಯಕ್ರಮ ಆರಂಭವಾಗಲಿದೆ. ನಂತರ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು ಎಂದು ತಿಳಿದುಬಂದಿದೆ.
- Advertisement -

Related news

error: Content is protected !!