Saturday, November 14, 2026
spot_imgspot_img
spot_imgspot_img

ಕೆಪಿಎಸ್‌ಸಿ ನೇಮಕಾತಿ ಹಗರಣ: 1.22 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಈ.ಡಿ

- Advertisement -
- Advertisement -

ಬೆಂಗಳೂರು : ಕೆಪಿಎಸ್‌ಸಿ ನೇಮಕಾತಿ ಅಕ್ರಮ ಸಂಬಂಧ ಜಾರಿ ನಿರ್ದೇಶನಾಲಯ (ಈ.ಡಿ) 1.22 ಕೋಟಿ ರೂ. ಮೌಲ್ಯದ ಆಸ್ತಿಯನ್ನು PMLA ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ನೇಮಕಾತಿ ಅಕ್ರಮ ಸಂಬಂಧ ಅಕ್ಟೋಬರ್ 6 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾ‌ರ್, ಕೆಪಿಎಸ್‌ಸಿ ಸದಸ್ಯೆ ಗೀತಾ ಬಿ.ವಿ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮನೆಗಳ ಮೇಲೆ ಏಕ ಕಾಲಕ್ಕೆ ದಾಳಿ ಮಾಡಲಾಗಿತ್ತು.ಈ ದಾಳಿಯ ವೇಳೆ ಪತ್ತೆಯಾದ 1.22 ಕೋಟಿ ರೂ. ಮೌಲ್ಯದ ಸ್ಥಿರ ಹಾಗೂ ಚರಾಸ್ಥಿಯನ್ನು ತನಿಖೆಯ ಭಾಗವಾಗಿ ಮುಟ್ಟುಗೋಲು ಹಾಕುತ್ತಿರುವುದಾಗಿ ಈಡಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!