Sunday, November 15, 2026
spot_imgspot_img
spot_imgspot_img

ಸೌಜನ್ಯಾ ಪ್ರಕರಣ: ಎಸ್‌ಐಟಿ ಮುಂದೆ ಐವರು ಪ್ರಮುಖ ಸಾಕ್ಷಿಗಳ ಹೇಳಿಕೆ ದಾಖಲು

- Advertisement -
- Advertisement -

ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು (ಎಸ್‌ಐಟಿ) ಶನಿವಾರ(ನ.14) ದಂದು ಐವರು ಪ್ರಮುಖ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

ಸೌಜನ್ಯಾಳ ಮಾವ ವಿಠಲ ಗೌಡ ಸೇರಿದಂತೆ ಕೃಷ್ಣಪ್ಪ, ಪುರಂದರ ಗೌಡ, ಯಶೋದಾ ಮತ್ತು ಆಕೆಯ ಪುತ್ರ ಪ್ರತೀಕ್ ಅವರು ನಗರದ ಎಸ್‌ಐಟಿ ಕಚೇರಿಗೆ ಹಾಜರಾಗಿ ತನಿಖಾ ಸಂಸ್ಥೆಯ ಮುಂದೆ ತಮ್ಮ ಅಧಿಕೃತ ಹೇಳಿಕೆಗಳನ್ನು ದಾಖಲಿಸಿದ್ದಾರೆ.

ಎಸ್‌ಐಟಿ ತನಿಖಾಧಿಕಾರಿ ಎಸ್‌ಪಿ ಲೋಕೇಶ್ ಜಗಲಾಸರ್ ಮತ್ತು ಎಸಿಪಿ ಮನೋಜ್ ನಾಯಕ್ ಅವರ ಸಮ್ಮುಖದಲ್ಲಿ ಈ ಹೇಳಿಕೆ ದಾಖಲು ಪ್ರಕ್ರಿಯೆ ನಡೆದಿದೆ.

2012ರ ಅಕ್ಟೋಬರ್ 9ರಂದು ಸೌಜನ್ಯಾ ಬರ್ಬರವಾಗಿ ಕೊಲೆಯಾಗುವ ಕೆಲವೇ ಕ್ಷಣಗಳ ಮುನ್ನ, ಧರ್ಮಸ್ಥಳ ಗ್ರಾಮದ ಸ್ನಾನಘಟ್ಟದ ಬಳಿ ಆಕೆ ನಡೆದುಕೊಂಡು ಹೋಗುತ್ತಿರುವುದನ್ನು ಕೊನೆಯದಾಗಿ ನೋಡಿದವರಲ್ಲಿ ಈ ಐವರೂ ಸೇರಿದ್ದಾರೆ ಎನ್ನಲಾಗಿದೆ. ಹೀಗಾಗಿ, ಇವರ ಹೇಳಿಕೆಗಳು ತನಿಖೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿವೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ದಶಕದಷ್ಟು ಹಳೆಯದಾದ ಈ ಪ್ರಕರಣದ ಹೊಸ ತನಿಖೆಯ ನಿರ್ಣಾಯಕ ಭಾಗವಾಗಿ, ಸಂತ್ರಸ್ತೆಯನ್ನು ಕೊನೆಯದಾಗಿ ಕಂಡವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!