Monday, November 16, 2026
spot_imgspot_img
spot_imgspot_img

ಕೆಎಎಸ್ ಪರೀಕ್ಷೆ ವೇಳೆ ಮಂಗಳೂರಿನಲ್ಲಿ ವಿವಾದ: ಮಹಿಳಾ ಅಭ್ಯರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ

- Advertisement -
- Advertisement -

ಕೆಎಎಸ್ ಪರೀಕ್ಷೆ: ಮಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ಮಹಿಳಾ ಅಭ್ಯರ್ಥಿಗಳ ಜೊತೆ ಅಸಭ್ಯ ವರ್ತನೆ ಆರೋಪ; ಹಿಜಾಬ್‌ಗೂ ನಿರ್ಬಂಧಮಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ ನವೆಂಬರ್ 15ರಂದು ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ವೇಳೆ ಮಂಗಳೂರಿನ ಪರೀಕ್ಷಾ ಕೇಂದ್ರವೊಂದರಲ್ಲಿ ಮಹಿಳಾ ಅಭ್ಯರ್ಥಿಗಳ ಜೊತೆ ಭದ್ರತಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ್ದಾರೆ ಹಾಗೂ ಹಿಜಾಬ್ ಧರಿಸಿದ್ದ ಅಭ್ಯರ್ಥಿಗಳಿಗೆ ನಿರ್ಬಂಧ ವಿಧಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪರೀಕ್ಷಾ ಕೇಂದ್ರದಲ್ಲಿ ಭದ್ರತಾ ತಪಾಸಣೆಯ ಹೆಸರಿನಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಅನಗತ್ಯ ತೊಂದರೆ ನೀಡಲಾಗಿದೆ. ಹಿಜಾಬ್ ಧರಿಸಿ ಬಂದ ಅಭ್ಯರ್ಥಿಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಇದರಿಂದ ಪರೀಕ್ಷೆ ಬರೆಯಲು ಬಂದಿದ್ದ ಮಹಿಳೆಯರು ಮುಜುಗರ ಹಾಗೂ ಮಾನಸಿಕ ಒತ್ತಡ ಅನುಭವಿಸಿದ್ದಾರೆ ಎನ್ನಲಾಗಿದೆ.ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು.

ಆದರೆ ಭದ್ರತಾ ತಪಾಸಣೆಯ ವೇಳೆ ಮಹಿಳಾ ಅಭ್ಯರ್ಥಿಗಳ ಗೌಪ್ಯತೆ ಮತ್ತು ಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ವರ್ತಿಸಲಾಗಿದೆ ಎಂಬ ಆರೋಪ ಇದೀಗ ಚರ್ಚೆಗೆ ಗ್ರಾಸವಾಗಿದೆ.

- Advertisement -

Related news

error: Content is protected !!