- Advertisement -
- Advertisement -



ಸಂಪ್ಯ: ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಂಪ್ಯ ಪೊಲೀಸರು ದಾಖಲೆ ಇಲ್ಲದೆ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಈಶ್ವರಮಂಗಲ ಮಾಡನ್ನೂರು ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಪಾಸಣೆ ವೇಳೆ TN30BS1248 ನಂಬರ್ನ ಶ್ರೀ ವಿನಾಯಗ ಹೆಸರಿನ ಅಶೋಕ್ ಲೈಲೆಂಡ್ ಲಾರಿಯಲ್ಲಿ 3 ಹಸುಗಳನ್ನು ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಗೋ ಸಾಗಾಟಕ್ಕೆ ಸಂಬಂಧಿಸಿದಂತೆ ಸರಿಯಾದ ದಾಖಲೆಗಳು ಇಲ್ಲದ ಕಾರಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ವಾಹನ, 3 ಹಸುಗಳು ಹಾಗೂ ಗೋ ಸಾಗಾಟ ಮಾಡುತ್ತಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕನ ವಿಚಾರಣೆ ಮುಂದುವರೆದಿದೆ. ಹಸುಗಳನ್ನು ಎಲ್ಲಿಂದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -








