Monday, November 16, 2026
spot_imgspot_img
spot_imgspot_img

ಬಳ್ಳಾರಿ: ಕೌಟುಂಬಿಕ ಕಲಹ ಹಿನ್ನೆಲೆ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಷ ಸೇವಿಸಿ ಆತ್ಮಹತ್ಯೆ

- Advertisement -
- Advertisement -

ಬಳ್ಳಾರಿ: ಕೌಟುಂಬಿಕ ಕಲಹ ಹಿನ್ನೆಲೆ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಲ್ಲಾಹುಣ್ಣಿ ಗ್ರಾಮದಲ್ಲಿ ನಡೆದಿದೆ.

ಶೀಲಾ (28) ಆತ್ಮಹತ್ಯೆ ಮಾಡಿಕೊಂಡಿರುವ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ. ಬಲ್ಲಾಹುಣ್ಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯಾಗಿದ್ದ ಶೀಲಾ, ಕೌಟುಂಬಿಕ ಕಲಹ ಹಿನ್ನೆಲೆ ವಿಷ ಸೇವಿಸಿದ್ದರು. ವಿಷ ಸೇವಿಸಿದ್ದ ಶೀಲಾ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆಗೆ ಸ್ಪಂದಿಸದೇ ಇಂದು ನಿಧನರಾಗಿದ್ದಾರೆ. ಘಟನೆ ಸಂಬಂಧ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!