Wednesday, November 18, 2026
spot_imgspot_img
spot_imgspot_img

ನ.20ರಂದು ಸಿಎಂ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಗೆ ಚಾಲನೆ : ಸಚಿವ ಈಶ್ವರ್ ಖಂಡ್ರೆ

- Advertisement -
- Advertisement -

ಬೆಂಗಳೂರು : ಗ್ರಾಮೀಣಾಭಿವೃದ್ಧಿ, ಗ್ರಾಮೀಣ ರಸ್ತೆಗೆ ಸಂಬಂಧಿಸಿದ16ಸಾವಿರ ಕೋಟಿ ರೂ. ಮೊತ್ತದ 2 ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನ.20ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್ ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ 10 ಸಾವಿರ ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ರಸ್ತೆ ಸಂಪರ್ಕ ಅಭಿವೃದ್ಧಿ ಪಡಿಸಲಾಗುತ್ತಿದ್ದರೆ, ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ 6 ಸಾವಿರ ಕೋಟಿ ರೂ. ವೆಚ್ಚದಲ್ಲಿ ಗ್ರಾಮಗಳ ಆಂತರಿಕ ರಸ್ತೆ ಮತ್ತು ಇತರ ಕಾಮಗಾರಿಗಳನ್ನು ಅನುಷ್ಠಾ ನ ಮಾಡಲಾಗುವುದು ಎಂದು ಹೇಳಿದರು.

ಅಸ್ತಿತ್ವದಲ್ಲಿರುವ ಹಾಗೂ ಹಾಳಾಗಿರುವ ಡಾಂಬರು ರಸ್ತೆಗಳನ್ನು ಗುರುತಿಸಿ, ಅವುಗಳ ಅಭಿವೃದ್ಧಿ ಮಾಡಲು 7 ಸಾವಿರ ಕೋಟಿ ರೂ. ನೀಡಲಾಗಿದೆ. ಹಾಲಿ ಪ್ರಮುಖ ಗ್ರಾಮೀಣ ರಸ್ತೆಗಳಿಗೆ ಮತ್ತೊಂದು ಪದರ ಡಾಂಬರು ಹಾಕಲು 3 ಸಾವಿರ ಕೋಟಿ ರೂ. ಮೊತ್ತ ಒದಗಿಸಲಾಗುವುದು ಎಂದು ಈಶ್ವರ್ ಖಂಡ್ರೆ ಮಾಹಿತಿ ನೀಡಿದರು.ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವ ರಸ್ತೆಗಳನ್ನು 3 ವರ್ಷಗಳ ವಾರ್ಷಿಕ ನಿರ್ವಹಣೆ ಮಾಡಬೇಕಾಗುತ್ತದೆ. ಕಾಮಗಾರಿಯಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳಲು ಪ್ರತಿ ಕಾಮಗಾರಿಯ ಪ್ರಾರಂಭದಲ್ಲಿ ಹಾಗೂ ಪೂರ್ಣಗೊಂಡ ನಂತರ ಜಿಪಿಎಸ್ ಆಧಾರಿತ ಫೋಟೋ ಮತ್ತು ವೀಡಿಯೋ ಚಿತ್ರೀಕರಣವನ್ನು ಕಡ್ಡಾಯವಾಗಿ ಮಾಡುವಂತೆ ಸೂಚಿಸಲಾಗಿದ್ದು, ತಪ್ಪಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ರಾಜ್ಯದ ಗ್ರಾ.ಪಂ. ಪರಿಮಿತಿಯ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳನ್ನು 6 ಸಾವಿರ ಕೋಟಿ ರೂ. ಮೊತ್ತದಲ್ಲಿ ನಿರ್ಮಿತಿ ಕೇಂದ್ರ, ಕೆ.ಆರ್.ಐ.ಡಿ.ಎಲ್., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೂಲಕ ಅಭಿವೃದ್ಧಿ ಪಡಿಸಲಾಗುವುದು. ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳನ್ನು ಬೇರೆ ಯಾವುದೇ ಯೋಜನೆಯಡಿ ಕೈಗೆತ್ತಿಕೊಳ್ಳದಿರುವ ಬಗ್ಗೆ ಕಾರ್ಯಪಾಲಕ ಅಭಿಯಂತರರು ಡಿಪಿಆರಿಯಲ್ಲಿ ಕಡ್ಡಾಯವಾಗಿ ದೃಢೀಕರಿಸಬೇಕು, ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿಯ ವಿವರಗಳನ್ನು ಎನ್.ಜಿ.ಎಸ್.ಕೆ. ತಂತ್ರಾಂಶದಲ್ಲಿ ದಾಖಲಿಸಬೇಕು ಎಂದು ಅವರು ಹೇಳಿದರು.ಗ್ರಾಮೀಣಾಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಗ್ರಾಮೀಣ ರಸ್ತೆ ಅಭಿವೃದ್ಧಿಗೆ 16ಸಾವಿರ ಕೋಟಿ ರೂ. ಅನುಮೋದನೆ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಈಶ್ವರ್ ಖಂಡ್ರೆ ನಾಡಿನ ಜನರ ಪರವಾಗಿ ಧನ್ಯವಾದ ಅರ್ಪಿಸಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.

- Advertisement -

Related news

error: Content is protected !!