Wednesday, November 18, 2026
spot_imgspot_img
spot_imgspot_img

ಬಾಕಿ ಟ್ರಾಫಿಕ್ ದಂಡದ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ಸರ್ಕಾರ – ನ. 21ರಿಂದ ಡಿ. 11ರವರೆಗೆ ಅವಕಾಶ

- Advertisement -
- Advertisement -

ಬೆಂಗಳೂರು: ವಾಹನ ಸವಾರರಿಗೆ ಸಿಹಿಸುದ್ದಿ ನೀಡಿರುವ ಕರ್ನಾಟಕ ಸರ್ಕಾರ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತದ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದ್ದು, ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಈ ರಿಯಾಯಿತಿ ಸೌಲಭ್ಯ ಲಭ್ಯವಿರಲಿದೆ.

ನಿಗದಿತ ಅವಧಿಯೊಳಗೆ ಬಾಕಿ ಇರುವ ದಂಡದ ಮೊತ್ತದಲ್ಲಿ ಕೇವಲ ಶೇ. 50ರಷ್ಟನ್ನು ಪಾವತಿಸುವ ಮೂಲಕ ವಾಹನ ಸವಾರರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರ ಈ ಹಿಂದೆ ನೀಡಿದ್ದ ರಿಯಾಯಿತಿ ಅವಧಿಯನ್ನು ವಿಸ್ತರಿಸುವಂತೆ ಸಾರ್ವಜನಿಕರಿಂದ ಮನವಿಗಳು ಕೇಳಿಬಂದಿದ್ದ ಹಿನ್ನೆಲೆ ಮನವಿಗಳನ್ನು ಪರಿಗಣಿಸಿರುವ ಸರ್ಕಾರ, ವಾಹನ ಸವಾರರಿಗೆ ಮತ್ತೊಮ್ಮೆ ರಿಯಾಯಿತಿ ಸೌಲಭ್ಯವನ್ನು ನೀಡಲು ನಿರ್ಧರಿಸಿದೆ.

ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು, ಈ ನಿಗದಿತ ಅವಧಿಯೊಳಗೆ ಅರ್ಧದಷ್ಟು ದಂಡದ ಮೊತ್ತವನ್ನು ಪಾವತಿಸಿ ತಮ್ಮ ಬಾಕಿಯನ್ನು ಚುಕ್ತಾ ಮಾಡಬಹುದಾಗಿದೆ.

ದೀರ್ಘಕಾಲದಿಂದ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಮತ್ತು ವಾಹನ ಮಾಲೀಕರು ತಮ್ಮ ಬಾಕಿ ದಂಡವನ್ನು ಪಾವತಿಸಲು ಉತ್ತೇಜಿಸುವುದು ಈ ಉಪಕ್ರಮದ ಮುಖ್ಯ ಉದ್ದೇಶವಾಗಿದೆ.

ವಾಹನ ಸವಾರರು ನವೆಂಬರ್ 21ರಿಂದ ಡಿಸೆಂಬರ್ 11ರವರೆಗಿನ ಈ ರಿಯಾಯಿತಿ ಅವಧಿಯ ಸದುಪಯೋಗ ಪಡೆದುಕೊಂಡು, ತಮ್ಮ ಬಾಕಿ ಇರುವ ಸಂಚಾರ ದಂಡವನ್ನು ರಿಯಾಯಿತಿ ದರದಲ್ಲಿ ಪಾವತಿಸಿ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!