

ಬಂಟ್ವಾಳ: ರಾಜ್ಯ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಶೂನ್ಯ ಆಡಳಿತ, ಬೆಲೆ ಏರಿಕೆ ಹಾಗೂ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜನಾಂದೋಲನದ ಭಾಗವಾಗಿ ವೀರಕಂಭ ಬಿಜೆಪಿ ಶಕ್ತಿ ಕೇಂದ್ರದ ನೇತೃತ್ವದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಅರ್ಹ ಫಲಾನುಭವಿಗಳ ಪಿಂಚಣಿ ರದ್ದಾಗಿರುವುದರಿಂದ ಬಡವರು ಸರಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆಶ್ರಯ ಯೋಜನೆಯಡಿ ಮನೆಗಳ ಮಂಜೂರಾತಿ ವಿಳಂಬವಾಗುತ್ತಿದ್ದು, ಮರಳು ಲಭ್ಯತೆಯ ಸಮಸ್ಯೆಯೂ ಜನರನ್ನು ಕಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ವೀರಕಂಭ ಗ್ರಾಮದ ಎರ್ಮೆಮಜಲು ಜಂಕ್ಷನ್ನಿಂದ ಪಾದಯಾತ್ರೆ ಮೂಲಕ ಪಂಚಾಯತ್ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರಕಾರದ ಆಡಳಿತ ವೈಫಲ್ಯ, ಬೆಲೆ ಏರಿಕೆ ಹಾಗೂ ಪಿಂಚಣಿ ರದ್ದತಿ ನಿರ್ಧಾರವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಬಳಿಕ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮನವಿ ಸಲ್ಲಿಸಿದರು.ಪ್ರತಿಭಟನಾ ಸಭೆಯಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾ ವಕ್ತಾರ ಮಾಧವ ಮಾವೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಪ್ಪ ಪೂಜಾರಿ ಹಾಗೂ ಶಕ್ತಿ ಕೇಂದ್ರದ ಪ್ರಭಾರಿ ರಾಮದಾಸ್ ಬಂಟ್ವಾಳ ಮಾತನಾಡಿ ರಾಜ್ಯ ಸರಕಾರದ ಆಡಳಿತ ನೀತಿಗಳನ್ನು ಟೀಕಿಸಿದರು.
ವೀರಕಂಭ ಶಕ್ತಿ ಕೇಂದ್ರದ ಪ್ರಮುಖ್ ಜಯಪ್ರಸಾದ್, ಮಂಡಲ ಕಾರ್ಯದರ್ಶಿ ಸನತ್ ಕುಮಾರ್ ರೈ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರವಿಂದ್ ರೈ, ಪ್ರಧಾನ ಕಾರ್ಯದರ್ಶಿ ನಾಗೇಶ್ ಭಂಡಾರಿ, ರೈತ ಮೋರ್ಚಾ ಅಧ್ಯಕ್ಷ ಉಮೇಶ್ ಶೆಟ್ಟಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಪತ್ ಕೋಟ್ಯಾನ್, ಪಕ್ಷದ ಹಿರಿಯರಾದ ಚಂದ್ರಶೇಖರ್ ಬಾಯಿಲ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಒಬಿಸಿ ಉಪಾಧ್ಯಕ್ಷ ದಿನೇಶ್, ಯುವ ಮೋರ್ಚಾ ಉಪಾಧ್ಯಕ್ಷ ಸಂದೀಪ್ ಪೂಜಾರಿ, ಬಿಜೆಪಿ ಜಿಲ್ಲಾ ಪ್ರಮುಖ ದೇವಿಪ್ರಸಾದ್ ಬೆಂಜತಿಮಾರ್, ಮಹಾಶಕ್ತಿ ಕೇಂದ್ರದ ಯುವ ಮೋರ್ಚಾ ಅಧ್ಯಕ್ಷ ಸಂದೇಶ್, ಸೊಸೈಟಿ ನಿರ್ದೇಶಕ ಕೊರಗಪ್ಪ ಗೌಡ, ಕೊರಗಪ್ಪ ನಾಯ್ಕ್, ನೋಣಯ ಎಂ.ಆರ್., ವಿಶ್ವನಾಥ್ ಎಂ., ಪಕ್ಷದ ಪ್ರಮುಖರಾದ ಚಿದಾನಂದ ಕಲ್ಮಲೆ, ರಾಜೇಂದ್ರ ಟೈಲರ್, ಜಯಂತಿ, ವೀರಪ್ಪ ಮೂಲ್ಯ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ರವೀಂದ್ರ ಪಾದೆ, ವೇಣುಗೋಪಾಲ್, ಚಂದ್ರಶೇಖರ್ ಗೌಡ, ಯಾದವ ಸಾಲಿಯಾನ್, ಕಾರ್ಯದರ್ಶಿಗಳಾದ ದಿನೇಶ್ ಆಚಾರ್, ಪುಷ್ಪರಾಜ್ ರೈ, ಬಾಬಾಕಿರಣ್, ಪಂಚಾಯತ್ ಸದಸ್ಯರಾದ ಜಯಂತಿ, ಉಮಾವತಿ ಸೇರಿದಂತೆ ಮಹಿಳಾ ಮುಖಂಡರು, ಬಿಜೆಪಿ ಕಾರ್ಯಕರ್ತರು, ಪಿಂಚಣಿ ಸಂತ್ರಸ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಜಯಪ್ರಸಾದ್ ಶೆಟ್ಟಿ ಸ್ವಾಗತಿಸಿ, ಸಂದೀಪ್ ಧನ್ಯವಾದ ಸಲ್ಲಿಸಿದರು.








