


ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ‘ಜೇಸೀ ಕಲರವ – 2026’ ನವೆಂಬರ್ 29ರ ಭಾನುವಾರದಂದು ವಿಜೃಂಭಣೆಯಿಂದ ನಡೆಯಲಿದೆ.
ಬೆಳಿಗ್ಗೆ 9:30ಕ್ಕೆ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ನರ್ಸರಿ ಮತ್ತು ಪ್ರಾಥಮಿಕ ವಿದ್ಯಾರ್ಥಿಗಳ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12:30 ರಿಂದ 1:30ರವರೆಗೆ ಊಟದ ವಿರಾಮದ ಬಳಿಕ ಸಂಗೀತ, ಕರಾಟೆ ಮತ್ತು ಅಬಾಕಸ್ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 1:30ಕ್ಕೆ ನಡೆಯಲಿರುವ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್.ಪಿ.ಎಲ್ ಕುಮಾರಿ ರಾಶಿ ಜಿ.ಆರ್ (10ನೇ ತರಗತಿ) ವಹಿಸಲಿದ್ದು, ಶಾಲೆಯ ಹಿರಿಯ ವಿದ್ಯಾರ್ಥಿ, ಎಂ.ಬಿ.ಎ ಪದವೀಧರ ಅನಿರುದ್ಧ್ ಕೂಡೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಳಿಕೆ ಎಸ್.ಎಸ್.ಎಸ್.ಎಲ್.ಎಸ್ ಹೈಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿ ವಿಭು ಭಟ್ ಗೌರವ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 3 ಗಂಟೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ 5 ಗಂಟೆಗೆ ನೂತನ ಆಡಳಿತ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟನೆ ನೆರವೇರಿಸಲಿದ್ದು, ವಿಠಲ್ ಜೇಸೀಸ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಜೆಸಿ ಡಿ. ಶ್ರೀಧರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ನಾಯ್ತೊಟ್ಟು ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಇದೇ ವೇಳೆ ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿ ಮಂಗಳೂರಿನ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಅಶ್ವಿನ್ ಟಿ.ಆರ್ ಅವರು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಲಿದ್ದು, ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕೆ. ಅವರು ಗ್ರಂಥಾಲಯವನ್ನು ಉದ್ಘಾಟಿಸಲಿದ್ದಾರೆ.
ಪೂರ್ವಭಾವಿ ಕಾರ್ಯಕ್ರಮಗಳು:
ನವೆಂಬರ್ 24ರ ಮಂಗಳವಾರ ಫ್ಯಾನ್ಸಿ ಡ್ರೆಸ್ ಸ್ಪರ್ಧೆಗಳು ನಡೆಯಲಿದ್ದು, ಕುಟೀರದಿಂದ 4ನೇ ತರಗತಿವರೆಗೆ ಬೆಳಿಗ್ಗೆ 9:30 ರಿಂದ ಹಾಗೂ 5 ರಿಂದ 10ನೇ ತರಗತಿವರೆಗೆ ಮಧ್ಯಾಹ್ನ 1:30 ರಿಂದ ನಡೆಯಲಿದೆ.
ನವೆಂಬರ್ 25ರ ಬುಧವಾರ ಬೆಳಿಗ್ಗೆ 9:30ಕ್ಕೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಎಲ್ಲಾ ಕಾರ್ಯಕ್ರಮಗಳು ನಿಗದಿತ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಲಿವೆ ಎಂದು ಶಾಲಾ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.








