- Advertisement -
- Advertisement -



ವಿಟ್ಲ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿ ಹರಿದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ಇಂದು ಸಂಜೆ ನಡೆದಿದೆ.
ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಫಾತಿಮಾ ಇಝಾ ಇಲ್ಯಾಸ್ ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ಈಕೆ ಶಾಲೆ ಬಿಟ್ಟು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಢಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
- Advertisement -








