Friday, November 20, 2026
spot_imgspot_img
spot_imgspot_img

ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಲಾರಿ ತಡೆದು ಚಾಲಕನ ಮೇಲೆ ಹಲ್ಲೆ, ಎರಡು ಪ್ರತ್ಯೇಕ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ: ಬಂಟ್ವಾಳ ಪೆರುವಾಯಿ ಗ್ರಾಮದ ದೇವಸ್ಥಾನವೊಂದರ ಬಳಿ ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ತಡೆದು, ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ನ. 19 ರಂದು ಸಂಜೆ, ಪೆರುವಾಯಿ ಗ್ರಾಮದ ದೇವಸ್ಥಾನವೊಂದರ ಬಳಿ ಕೆಲವರು ಲಾರಿಯನ್ನು ತಡೆದು ನಿಲ್ಲಿಸಿರುವ ಬಗ್ಗೆ ಮಾಹಿತಿ ಪಡೆದ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದರು.

ಅಲ್ಲಿ ನಿಂತಿದ್ದ KL-59-C-4274 ನೋಂದಣಿಯ ಲಾರಿಯ ಚಾಲಕನನ್ನು ವಿಚಾರಿಸಿದಾಗ, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಲಾರಿಯನ್ನು ಲೋಡ್ ಸಹಿತ ಸ್ವಾಧೀನಪಡಿಸಿಕೊಂಡ ಪೊಲೀಸರು, ಮಂಜೇಶ್ವರ ಬಾಯರ ನಿವಾಸಿ ಚಾಲಕ ಜನಾರ್ದನ(38) ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರ: 239/2026 ರಂತೆ BNS 2023 ಕಲಂ 303(2), MMDR ಕಾಯ್ದೆ 1957 ಕಲಂ 4(1), 21 ಹಾಗೂ ಕರ್ನಾಟಕ ಮೈನರ್ ಮಿನರಲ್ ರೂಲ್ಸ್ 1994 ಕಲಂ 3, 44 ರಂತೆ ಪ್ರಕರಣ ದಾಖಲಿಸಿದ್ದಾರೆ.

ಇದೇ ಪ್ರಕರಣ ಮುಂದುವರಿದಂತೆ, ದೂರುದಾರ ಚಾಲಕ ಜನಾರ್ದನ (38) ಅವರು ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಾಗಿದೆ.

ಜನಾರ್ದನ ಅವರು ಲಾರಿಯಲ್ಲಿ ಕಲ್ಲು ಲೋಡ್ ಮಾಡಿ ಪೆರುವಾಯಿ ದೇವಸ್ಥಾನದ ಬಳಿ ತಲುಪಿದಾಗ, ಪರಿಚಯದ ಆರೋಪಿಗಳಾದ ಸತೀಶ ಮಣಿಯಾಣಿ ಮತ್ತು ಶ್ರೀನಿವಾಸ ರೈ ಎಂಬವರು ಲಾರಿಯನ್ನು ತಡೆದು, ಜನಾರ್ದನ ಅವರನ್ನು ಲಾರಿಯಿಂದ ಎಳೆದು ಹಾಕಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 240/2026 ರಂತೆ BNS 2023 ಕಲಂ 126(2), 352, 351(2), 115(2), 3(5) ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!