Saturday, November 21, 2026
spot_imgspot_img
spot_imgspot_img

ಮಣಿಪುರದಲ್ಲಿ ವಿಷಕಾರಿ ಮದ್ಯ ದುರಂತ: 15 ಮಂದಿ ಸಾವು, 181 ಜನ ಆಸ್ಪತ್ರೆಗೆ ದಾಖಲು

- Advertisement -
- Advertisement -

ಇಂಫಾಲ್: ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಅಕ್ರಮ ವಿಷಕಾರಿ ಮದ್ಯ ಸೇವಿಸಿ ಕನಿಷ್ಠ 15 ಜನರು ಮೃತಪಟ್ಟಿದ್ದು, 181 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನವೆಂಬರ್ 18 ರಿಂದ 20ರ ವರೆಗೆ ಈ ಸರಣಿ ಸಾವಾಗಿದ್ದು, ಅಸ್ವಸ್ಥಗೊಂಡವರನ್ನು ಇಂಫಾಲ್‌ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಶಿಜಾ ಆಸ್ಪತ್ರೆ ಮತ್ತು ಬಬಿನಾ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅಸ್ವಸ್ಥರನ್ನು ದಾಖಲಿಸಲಾಗಿದೆ. ಅದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ರೋಗಿಗಳಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆ ಮತ್ತು ಅಗತ್ಯವಿರುವ ಎಲ್ಲಾ ಬೆಂಬಲವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆಸ್ಪತ್ರೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಈ ದುರಂತಕ್ಕೆ ಕಾರಣವಾದ ಮದ್ಯ ಎಲ್ಲಿಂದ ಬಂದಿದೆ. ಈ ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!