Saturday, November 21, 2026
spot_imgspot_img
spot_imgspot_img

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ, 54 ಸಾವಿರ ರೂ. ದಂಡ

- Advertisement -
- Advertisement -

ಮಂಗಳೂರು: ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ಹಾಗೂ 54 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ನೆರೆಮನೆಯ ನಿವಾಸಿ ಅನಿಲ್ ಎಂಬಾತ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದಡಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಪ್ರಕರಣ ದಾಖಲಾಗಿತ್ತು.ಆಗಿನ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿ ಪ್ರಕರಣದ ತನಿಖೆ ನಡೆಸಿದ್ದರು. ಬಳಿಕ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 54,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

- Advertisement -

Related news

error: Content is protected !!