Sunday, November 22, 2026
spot_imgspot_img
spot_imgspot_img

ವಿಟ್ಲದಲ್ಲಿ ನ.23ರಂದು ಮಕ್ಕಳ ಯಕ್ಷಗಾನ ರಂಗಪ್ರವೇಶ

- Advertisement -
- Advertisement -

ವಿಟ್ಲ: ಆರ್.ಕೆ. ಯಕ್ಷಗಾನ ಕಲಾ ಕೇಂದ್ರ (ರಿ.) ವಿಟ್ಲ ಇದರ ವತಿಯಿಂದ ಯಕ್ಷಗುರು ನಾಟ್ಯನಿಕೇತನ ನಾಟ್ಯಮಯೂರಿ ರಕ್ಷಿತ್ ಶೆಟ್ಟಿ ಪಡ್ರೆ ಅವರ ನಿರ್ದೇಶನದಲ್ಲಿ ಮಕ್ಕಳ ಯಕ್ಷಗಾನ ರಂಗಪ್ರವೇಶ ಕಾರ್ಯಕ್ರಮ ನ.23ರಂದು ಸೋಮವಾರ ಸಂಜೆ 4 ಗಂಟೆಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಂಜೆ 4 ಗಂಟೆಗೆ ದೇವರ ಪ್ರಾರ್ಥನೆ ಹಾಗೂ ಚೌಕಿ ಪೂಜೆ, 4.30ರಿಂದ ಮಕ್ಕಳಿಂದ ‘ಗಜೇಂದ್ರ ಮೋಕ್ಷ’ ಯಕ್ಷಗಾನ ಪ್ರದರ್ಶನ, ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಕೃಷ್ಣಯ್ಯ ಕೆ. ವಿಟ್ಲ ಅರಮನೆ ವಹಿಸಲಿದ್ದು, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

ಬಳಿಕ ಮಕ್ಕಳಿಂದ ‘ಶ್ರೀನಿವಾಸ ಕಲ್ಯಾಣ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮಕ್ಕೆ ಯಕ್ಷಗಾನಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೇಂದ್ರದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ವಿನಂತಿಸಿದ್ದಾರೆ.

- Advertisement -

Related news

error: Content is protected !!