- Advertisement -
- Advertisement -



ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಯನ್ನ ವಿಶೇಷ ತನಿಖಾ ತಂಡ ಚುರುಕುಗೊಳಿಸಿದೆ. ಈ ಹಿನ್ನೆಲೆ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್ಐಟಿ ಕಚೇರಿಗೆ ಆಗಮಿಸಿದ್ದು, ಬ್ಯಾಗ್ ತುಂಬಾ ದಾಖಲೆಗಳನ್ನು ತಂದಿದ್ದಾರೆ.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಎಸ್ಐಟಿ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆ ಗಿರೀಶ್ ಮಟ್ಟಣ್ಣನವರ್ ಅವರು ಹಲವು ಕಡತಗಳು ಹಾಗೂ ಪತ್ರಿಕಾ ವರದಿಗಳನ್ನು ಸಂಗ್ರಹಿಸಿ ಕಚೇರಿಗೆ ಆಗಮಿಸಿದ್ದಾರೆ.
ಸೌಜನ್ಯ ಪರವಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಗಿರೀಶ್ ಮಟ್ಟಣ್ಣನವರ್, ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಮತ್ತು ಮಾಹಿತಿಯನ್ನ ತನಿಖಾಧಿಕಾರಿಗಳಿಗೆ ಒದಗಿಸುವ ಸಾಧ್ಯತೆಯಿದೆ.
ಇದೇ ವೇಳೆ, ಸೌಜನ್ಯ ಪ್ರಕರಣದ ವಿಚಾರವಾಗಿ ಮಹೇಶ್ ಶೆಟ್ಟಿ ತಿಮರೋಡಿಗೂ ಎಸ್ಐಟಿ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.
- Advertisement -








