Monday, November 23, 2026
spot_imgspot_img
spot_imgspot_img

ಮಂಗಳೂರು: ರಾತ್ರಿ ವ್ಯಾಪಾರದ ಅವಧಿ ವಿಸ್ತರಣೆ; 11.45ರವರೆಗೆ ಅಂಗಡಿ, ಹೋಟೆಲ್ ತೆರೆಯಲು ಅವಕಾಶ

- Advertisement -
- Advertisement -

ಮಂಗಳೂರು: ಮಂಗಳೂರು ನಗರದಲ್ಲಿ ರಾತ್ರಿ ವ್ಯಾಪಾರದ ಅವಧಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಪೊಲೀಸ್ ಇಲಾಖೆ ಸಡಿಲಗೊಳಿಸಿದ್ದು, ಇನ್ನು ಮುಂದೆ ರಾತ್ರಿ 11.45ರವರೆಗೆ ಅಂಗಡಿ, ಹೋಟೆಲ್ ಸೇರಿದಂತೆ ವಿವಿಧ ವ್ಯಾಪಾರ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.ಕಳೆದ ಒಂದೆರಡು ವರ್ಷಗಳಿಂದ ನಗರದ ಕೆಲವು ಕೋಮು ಸೂಕ್ಷ್ಮ ಪರಿಸ್ಥಿತಿಗಳು ಹಾಗೂ ಕಾನೂನು ಸುವ್ಯವಸ್ಥೆಯ ಹಿನ್ನೆಲೆಯಲ್ಲಿ ರಾತ್ರಿ ವ್ಯಾಪಾರದ ಸಮಯವನ್ನು 10.30ಕ್ಕೆ ನಿಗದಿಪಡಿಸಲಾಗಿತ್ತು.

ರಾತ್ರಿ ವೇಳೆ ನಡೆಯಬಹುದಾದ ಅಪರಾಧ ಚಟುವಟಿಕೆಗಳು, ಮಾದಕ ವಸ್ತುಗಳ ವ್ಯವಹಾರ ಹಾಗೂ ಅನುಮಾನಾಸ್ಪದ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಈ ನಿರ್ಬಂಧ ವಿಧಿಸಲಾಗಿತ್ತು.ಇದೀಗ ಮಂಗಳೂರು ನಗರದ ಕಾನೂನು ಸುವ್ಯವಸ್ಥೆ ಸುಧಾರಿಸಿರುವ ಹಿನ್ನೆಲೆಯಲ್ಲಿ ಹಿಂದಿನ ಆದೇಶವನ್ನು ಮರುಪರಿಶೀಲಿಸಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ವ್ಯಾಪಾರದ ಅವಧಿಯನ್ನು ವಿಸ್ತರಿಸಿ ಹೊಸ ಆದೇಶ ಹೊರಡಿಸಿದ್ದಾರೆ.ಈ ಆದೇಶದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರ ಕೇಂದ್ರಗಳು, ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ಇತರೆ ವ್ಯಾಪಾರ ಚಟುವಟಿಕೆಗಳನ್ನು ರಾತ್ರಿ 11.45ರವರೆಗೆ ನಡೆಸಲು ಅನುಮತಿ ನೀಡಲಾಗಿದೆ.

ರಾತ್ರಿ 11.45ರಿಂದ ಬೆಳಿಗ್ಗೆ 5.30ರವರೆಗೆ ಯಾವುದೇ ವ್ಯಾಪಾರ ಚಟುವಟಿಕೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.ನಿಗದಿತ ಸಮಯದ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!