Tuesday, November 24, 2026
spot_imgspot_img
spot_imgspot_img

ಪೋಷಕರ ಆಸ್ತಿ ಪಡೆದು ನಿರ್ಲಕ್ಷಿಸುವ ಮಕ್ಕಳಿಗೆ 3 ವರ್ಷ ಜೈಲು ಶಿಕ್ಷೆ: ಕೇರಳ ಸಿಎಂ ಎಚ್ಚರಿಕೆ

- Advertisement -
- Advertisement -

ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಕಠಿಣ ನಿಯಮವನ್ನು ಒಳಗೊಂಡ ಮಸೂದೆಯನ್ನು ಕೇರಳ ವಿಧಾನಸಭೆ ಅಂಗೀಕರಿಸಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ ವೃದ್ಧ ಪುರುಷರಿಗಾಗಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ವಸತಿ ಸೌಲಭ್ಯ ‘ಪಿತೃಮಂದಿರಂ’ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.ಹಿರಿಯ ನಾಗರಿಕರ ಹಕ್ಕುಗಳು ಮತ್ತು ರಕ್ಷಣೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ಈ ಮಸೂದೆಯನ್ನು ರೂಪಿಸಲಾಗಿದೆ.

ಪೋಷಕರಿಂದ ಆಸ್ತಿಯನ್ನು ಪಡೆದುಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಯಮವನ್ನು ಉದ್ದೇಶಪೂರ್ವಕವಾಗಿಯೇ ಮಸೂದೆಯಲ್ಲಿ ಸೇರಿಸಲಾಗಿದೆ ಎಂದು ಅವರು ಹೇಳಿದರು.ರಾಜ್ಯಪಾಲರ ಅಂಕಿತ ದೊರೆತ ಬಳಿಕ ಮಸೂದೆಯು ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದು ಬಳಿಕ ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಹಿರಿಯ ನಾಗರಿಕರಿಗೆ ಅಗತ್ಯವಾದ ಹಕ್ಕುಗಳು, ಭದ್ರತೆ ಮತ್ತು ಗೌರವಯುತ ಜೀವನವನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಡುತ್ತಾರೆ. ಆದರೆ ಮಕ್ಕಳು ಬೆಳೆದು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಇರಬಾರದು. ಹಿರಿಯರನ್ನು ಪ್ರೀತಿ ಮತ್ತು ಗೌರವದಿಂದ ನೋಡಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ಕನಸಾಗಿದೆ ಎಂದು ಅವರು ಹೇಳಿದರು.

- Advertisement -

Related news

error: Content is protected !!