ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಿ ವಿರುದ್ಧ ಪ್ರಕರಣ ಪ್ರಕರಣ ದಾಖಲು
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ತಾಲೂಕು ಗ್ರಾಮ ಸಹಾಯಕರ ಸಂಘದಿಂದ ಖಂಡನೆ



ವಿಟ್ಲ: ವೃದ್ಧಾಪ್ಯ ವೇತನ ಮಂಜೂರಾತಿಗೆ ಸಂಬಂಧಿಸಿದಂತೆ ಆದಾಯದ ವಿವರ ನಮೂದಿಸಿರುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಗ್ರಾಮ ಆಡಳಿತಾಧಿಕಾರಿ ಕಚೇರಿಗೆ ನುಗ್ಗಿ ಅಧಿಕಾರಿಗೆ ಅಶ್ಲೀಲ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆಯೊಡ್ಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ ಅದ್ಲಕುಂಞ ಬಿನ್ ಮಹಮ್ಮದ್ ಯಾನೆ ಮಮ್ಮದೆ ಬ್ಯಾರಿ ಎಂಬವರು ವೃದ್ಧಾಪ್ಯ ವೇತನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅರ್ಜಿದಾರರ ಪತ್ನಿಯ ಹೆಸರಿನಲ್ಲಿ ಸುಮಾರು ಎಂಟು ಕೊಠಡಿಗಳನ್ನು ಹೊಂದಿರುವ ವಾಣಿಜ್ಯ ಕಟ್ಟಡವಿದ್ದು, ಅದನ್ನು ಬಾಡಿಗೆಗೆ ನೀಡಲಾಗಿರುವುದರಿಂದ ನಿಗದಿತ ಮಿತಿಗಿಂತ ಹೆಚ್ಚಿನ ಆದಾಯವಿದೆ ಎಂದು ಗ್ರಾಮ ಆಡಳಿತಾಧಿಕಾರಿ ಅರ್ಜಿಯಲ್ಲಿ ನಮೂದಿಸಿದ್ದರು ಎನ್ನಲಾಗಿದೆ.ಇದರಿಂದ ಆಕ್ಷೇಪಗೊಂಡ ಮಹಮ್ಮದ್ ಇಸ್ಮಾಯಿಲ್ ಅವರು ಸೋಮವಾರ ಏಕಾಏಕಿ ಕನ್ಯಾನ ಗ್ರಾಮ ಆಡಳಿತಾಧಿಕಾರಿ ಕಚೇರಿಗೆ ನುಗ್ಗಿ, ಆದಾಯದ ವಿವರ ನಮೂದಿಸಿರುವ ವಿಚಾರವಾಗಿ ಗ್ರಾಮ ಆಡಳಿತಾಧಿಕಾರಿ ಅನಿಲ್ ಕುಮಾರ್ ಅವರನ್ನು ಅಶ್ಲೀಲ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ತಹಶೀಲ್ದಾರ್ ಅವರ ಅನುಮತಿಯೊಂದಿಗೆ ಗ್ರಾಮ ಆಡಳಿತಾಧಿಕಾರಿ ಅನಿಲ್ ಕುಮಾರ್ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಬಂಟ್ವಾಳ ತಾಲೂಕು ಘಟಕದ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ತಹಶೀಲ್ದಾರ್ ಅವರ ಅನುಮತಿಯೊಂದಿಗೆ ಗ್ರಾಮ ಆಡಳಿತಾಧಿಕಾರಿ ಅನಿಲ್ ಕುಮಾರ್ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಬಂಟ್ವಾಳ ತಾಲೂಕು ಘಟಕದ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಘಟನೆಗೆ ಸರ್ಕಾರಿ ನೌಕರರ ಸಂಘಟನೆಗಳ ಖಂಡನೆಗ್ರಾಮ ಆಡಳಿತಾಧಿಕಾರಿ ಮೇಲೆ ನಡೆದಿರುವ ಘಟನೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘ ತೀವ್ರ ಖಂಡನೆ ವ್ಯಕ್ತಪಡಿಸಿವೆ.
ದೂರು ನೀಡುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಗೌರವಾಧ್ಯಕ್ಷ ಎಂ. ಪ್ರವೀಣ್ ಕುಮಾರ್, ಉಪಾಧ್ಯಕ್ಷ ಕರಿಬಸಪ್ಪ ನಾಯಕ್, ಉಳ್ಳಾಲ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ತೌಫಿಕ್, ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಯತೀಶ್ ಹಡೀಲು, ಜಿಲ್ಲಾ ಉಪಾಧ್ಯಕ್ಷ ರಾಘವ ಗೌಡ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.








