Wednesday, November 25, 2026
spot_imgspot_img
spot_imgspot_img

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ: ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರಾಕೇಶ್ ಶೆಟ್ಟಿ

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಿಂಪಡೆದುಕೊಂಡಿದ್ದಾರೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನವೆಂಬರ್ 20ರಂದು ನಗರದ 66ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದ್ದರಿಂದ, ರಾಕೇಶ್ ಶೆಟ್ಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದಲ್ಲಿ ಜಾಮೀನು ಸಿಗಬಹುದಾದ ಅಪರಾಧಗಳು ಅರ್ಜಿದಾರರ ಮೇಲಿದೆ. ಒಂದೊಮ್ಮೆ ಬಂಧನಕ್ಕೆ ಒಳಗಾಗದರೆ ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಮಂಜೂರಾಗುತ್ತದೆ. ಆದ್ದರಿಂದ, ಈ ನಿರೀಕ್ಷಣಾ ಜಾಮೀನು ಅರ್ಜಿಯು ಊರ್ಜಿತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಇದರಿಂದ, ರಾಕೇಶ್ ಶೆಟ್ಟಿ ಅವರ ವಕೀಲರು ಅರ್ಜಿ ಹಿಂಪಡೆದುಕೊಂಡರು.

ಇದಕ್ಕೂ ಮುನ್ನ ರಾಕೇಶ್ ಶೆಟ್ಟಿ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ 10 ವರ್ಷದ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುವ ಅಪರಾಧಕ್ಕೆ ಸಂಬಂಧಿಸಿದ ಆರೋಪಗಳನ್ನು ಮಾಡಲಾಗಿದೆ. ಇದರಿಂದ, ಅರ್ಜಿದಾರರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ಈ ಮನವಿಗ ಆಕ್ಷೇಪಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್ ಅವರು, ಪ್ರಕರಣದಲ್ಲಿ ಜಾಮೀನು ನೀಡಬಹುದಾದ ಅಪರಾಧಗಳು ಇರುವುದರಿಂದ ನಿರೀಕ್ಷಣಾ ಜಾಮೀನು ಕೋರಿರುವ ಈ ಅರ್ಜಿ ಊರ್ಜಿತವಲ್ಲ. ಜಾಮೀನು ನೀಡಬಹುದಾದ ಅಪರಾಧಗಳಿಗೆ ನೀರೀಕ್ಷಣಾ ಜಾಮೀನು ಅನ್ವಯವಾಗದು ಎಂದು ವಿವರಿಸಿದರು.

- Advertisement -

Related news

error: Content is protected !!