- Advertisement -
- Advertisement -



ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಲ್ಲಿಪುರಂನ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಗಾಯಗೊಂಡಿರುವ ಘಟನೆ ಮಂಗಳವಾರ (ನ. 24) ಬೆಳಗ್ಗೆ ಸುಮಾರು 11 ಗಂಟೆಗೆ ನಡೆದಿದೆ.
ತರಗತಿಯೊಳಗೆ ಸಹಪಾಠಿಯೊಬ್ಬ ದೇಶೀಯ ನಿರ್ಮಿತ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದು, ಪಲ್ಲಿಪುರಂನ ಪರಥೂರ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ.
ತರಗತಿಯಲ್ಲಿದ್ದ ವಿದ್ಯಾರ್ಥಿಯ ಮೇಲೆ ಮತ್ತೊಬ್ಬ ವಿದ್ಯಾರ್ಥಿ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಗುಂಡು ತಗುಲಿದ ಪರಿಣಾಮ ವಿದ್ಯಾರ್ಥಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಉದ್ದೇಶಪೂರ್ವಕವಾಗಿ ಗುಂಡು ಹಾರಿಸುವ ಬದಲು ಆಕಸ್ಮಿಕವಾಗಿ ರಿವಾಲ್ವರ್‌ನಿಂದ ಗುಂಡು ಸಿಡಿದಿರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಗುಂಡು ಆಕಸ್ಮಿಕವಾಗಿ ಸಿಡಿದಿದೆಯೇ ಅಥವಾ ಬೇರೆ ಕಾರಣವಿದೆಯೇ ಎಂಬ ಕುರಿತು ತನಿಖೆಯಿಂದ ಮಾಹಿತಿ ಲಭ್ಯವಾಗಬೇಕಿದೆ.
- Advertisement -








